Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : ಎಸ್ಐಟಿಗೆ ಪೊಲೀಸ್ ಠಾಣೆ ಅಧಿಕಾರ ನೀಡಿದ ರಾಜ್ಯ ಸರ್ಕಾರ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ : ಎಸ್ಐಟಿಗೆ ಪೊಲೀಸ್ ಠಾಣೆ ಅಧಿಕಾರ ನೀಡಿದ ರಾಜ್ಯ ಸರ್ಕಾರ

Share
1 Min Read
SHARE

ಧರ್ಮಸ್ಥಳ :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಅನ್ನೋ ಆರೋಪದಡಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ತೀವ್ರ ತನಿಖೆ ನಡೆಸುತ್ತಿದೆ. ಮುಸುಕುದಾರಿ ದೂರುದಾರನ ಗಂಭೀರ ಆರೋಪದ ಕುರಿತು ತನಿಖೆ ನಡೆಸುತ್ತಿರುವ ತನಿಖಾ ತಂಡ ಹಲೆವೆಡೆ ಉತ್ಖನನ ಮಾಡಿದೆ. ಇದೀಗ ತನಿಖೆ ನಡೆಸುತ್ತಿರುವ ಎಸ್ಐಟಿಗೆ  ರಾಜ್ಯ ಸರ್ಕಾರ ಪೊಲೀಸ್ ಠಾಣೆ ಎಂದು ಅಧಿಸೂಚನೆ ಹೊರಡಿಸಿದೆ.

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪದಡಿ ತನಿಖೆಗೆ ರಚನೆಯಾಗಿದ್ದ ಎಸ್ಐಟಿಗೆ ಪೊಲೀಸ್​ ಠಾಣೆ ಮಾನ್ಯತೆಯನ್ನ ಸರ್ಕಾರ ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್​ಎಸ್​​ಎಸ್​) ಕಲಂ 2 (1)(ಯು) ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿದ ಸರ್ಕಾರದ ಆದೇಶದಂತೆ 2025 ಜುಲೈ 19 ರಂದು ರಚನೆ ಮಾಡಲಾದ ಎಸ್​ಐಟಿಯನ್ನು ಪೊಲೀಸ್ ಠಾಣೆ ಎಂದು ಅನೌನ್ಸ್ ಮಾಡಲಾಗಿದೆ.

 

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಅನ್ನೋ ಆರೋಪದಡಿ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿ ತನಿಖೆಗೆ ಆದೇಶ ನೀಡಿತ್ತು. ಇದರಂತೆ ಎಸ್ಐಟಿ ಧರ್ಮಸ್ಥಳದ ಸುತ್ತ ಮುತ್ತಲಿನ ಕಾಡಿನಲ್ಲಿ ತನಿಖೆ ನಡೆಸುತ್ತಿದೆ. ಇದರ ನಡುವೆ ಬರುಡೆಗಾಗಿ ಉತ್ಖನನ ಕಾರ್ಯಾಚರಣೆ ವೇಳೆ ಬಂಗ್ಲಗುಡ್ಡೆ ಕಾಡಿನಲ್ಲಿ ಅಸ್ಥಿಪಂಜರವೊಂದು ಪತ್ತೆಯಾಗಿತ್ತು. ಮುಸುಕುದಾರಿ ದೂರುದಾರ ಗುರುತಿಸದೇ ಇದ್ದ ಸ್ಥಳದಲ್ಲಿ ಈ ಅಸ್ಥಿಪಂಜರ ಪತ್ತೆಯಾಗಿತ್ತು. ಶವಗಳ ಪ್ರಕರಣ ಸಂಬಂಧ ಮತ್ತೊಬ್ಬರ ದೂರುದಾರ ಜಯನ್ ಬಾಲಕಿ ಮೃತದೇಹ ಹೂತುಹಾಕಿರುವುದಾಗಿ ಆರೋಪಿಸಿ ದೂರು ನೀಡಲಾಗಿದೆ. ಮೇಲಿಂದ ಮೇಲೆ ಧರ್ಮಸ್ಥಳ ಪ್ರಕರಣದಲ್ಲಿ ಆರೋಪಗಳು, ದೂರುಗಳು ದಾಖಲಾಗುತ್ತಿರುವ ಸಂಬಂಧ ಇದೀಗ ರಾಜ್ಯ ಸರ್ಕಾರ ಎಸ್ಐಟಿಗೆ ವಿಶೇಷ ಅಧಿಕಾರ ನೀಡಿದೆ. ಎಸ್ಐಟಿಗೆ ಸ್ವತಂತ್ರವಾಗಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಅಧಿಕಾರ ನೀಡಿದೆ.

 

ಎಸ್​ಐಟಿಗೆ ನೇಮಕ ಮಾಡಲಾದ ಪೊಲೀಸ್ ನಿರೀಕ್ಷಕರ ದರ್ಜೆಯ/ಮೇಲ್ಪಟ್ಟ ದರ್ಜೆಯ ಅಧಿಕಾರಿಯನ್ನು ಬಿಎನ್​ಎಸ್​​ಎಸ್ ಅಡಿ ಠಾಣಾ ಅಧಿಕಾರಿ ಎಂದು ಘೋಷಣೆ ಮಾಡಲಾಗಿದೆ. ಎಸ್​ಐಟಿ ಬಿಎನ್​ಎಸ್​​ಎಸ್ ಅಡಿ ತನಿಖಾ ಕ್ರಮಗಳನ್ನು ಅನುಸರಿಸಿ ರಚಿಸಿರುವ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡುವಂತಹ ಅಧಿಕಾರವನ್ನು ಸರ್ಕಾರ ನೀಡಿದೆ.

TAGGED:#Stategovernment #policestation #authority #SIT #dharmastalacase
Share This Article
Facebook Twitter Copy Link Print
Previous Article Helath tips ಖಾಲಿ ಹೊಟ್ಟೆಯಲ್ಲಿ ಟೊಮೆಟೋವನ್ನು ತಿಂದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ
Next Article ಬುದ್ಧಿಮಾಂದ್ಯ ಯುವತಿ ಮೇಲೆ ಗ್ಯಾಂಗ್‌*ರೇಪ್‌ – ವಿಡಿಯೋ ಮಾಡಿ ಹರಿಬಿಟ್ಟ ದುರುಳರು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?