newsics.com
ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ವೇಳಾಪಟ್ಟಿ ಹಂಚಿಕೊಂಡಿರುವ ಸಿಎಂ ಕಚೇರಿ, ಮೋದಿ ನಾಲ್ಕು ಗಂಟೆಗಳ ಕಾಲ ಇರಲಿದ್ದು, ಈ ವೇಳೆ ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಗ್ಗೆ 10.30ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ, ಕೆಎಸ್ಆರ್ ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಆಗಮಿಲಿದ್ದು, ಅಲ್ಲಿ ಬೆಂಗಳೂರು- ಬೆಳಗಾವಿ ನಡುವೆ ವಂದೇ ಭಾರತ್ ಟ್ರೈನ್ ಗೆ ಚಾಲನೆ ನೀಡಲಿದ್ದಾರೆ.
ಇದೇ ವೇಳೆ ವರ್ಚುವಲ್ ಆಗಿ ಅಮೃತ್ಸರ್- ಶ್ರೀ ಮತಾ ವೈಷ್ಣೋದೇವಿ ಕತ್ರಿ ಹಾಗೂ ಅಜ್ನಿ (ನಾಗಪುರ್)- ಪುಣೆಯ ಮತ್ತೆರಡು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.
ಮೋದಿ ವೇಳಾಪಟ್ಟಿ
- ಆಗಸ್ಟ್ 10, ಬೆಳಗ್ಗೆ 7.50ಕ್ಕೆ ನವದೆಹಲಿಯಿಂದ ಹೊರಡಲಿರುವ ನರೇಂದ್ರ ಮೋದಿ.
- ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಲ್ಲಿ ಲ್ಯಾಂಡಿಂಗ್
- ಬೆಳಗ್ಗೆ 10.35ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಟೇಕಾಫ್
- ಬೆಳಗ್ಗೆ 10.55ಕ್ಕೆ ಮೇಖ್ರಿ ಸರ್ಕಲ್‌ನ ಹೆಚ್ ಕ್ಯೂಟಿಸಿ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್
- ಬೆಳಗ್ಗೆ 11 ಗಂಟೆಗೆ ಹೆಚ್ ಕ್ಯೂ ಟಿಸಿ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ.
- ಮಾರ್ಗ ಮಧ್ಯೆ ಮೇಖ್ರಿ ವೃತ್ತ, ಚಾಲುಕ್ಯ ವೃತ್ತ ಮತ್ತು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿಗೆ ಸ್ವಾಗತ.
- ಬೆಳಗ್ಗೆ 11.10ಕ್ಕೆ ಕೆಎಸ್‌ಆರ್ ರೈಲ್ವೇ ನಿಲ್ದಾಣಕ್ಕೆ ಪ್ರಧಾನಿ ಆಗಮನ.
- ಬೆಳಗ್ಗೆ 11.15ರಿಂದ 11.20ರವರೆಗೆ ಕೆಎಸ್‌ಆರ್ ರೈಲ್ವೇ ನಿಲ್ದಾಣದಲ್ಲಿ 3 ವಂದೇ ಮಾತರಂ ರೈಲುಗಳಿಗೆ ಚಾಲನೆ.
- ಬೆಳಗ್ಗೆ 11.25ಕ್ಕೆ ಕೆಎಸ್‌ಆರ್ ರೈಲ್ವೇ ನಿಲ್ದಾಣದಿಂದ ಪ್ರಧಾನಿ ನಿರ್ಗಮನ.
- ರಸ್ತೆ ಮಾರ್ಗವಾಗಿ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಮೋದಿ ಪ್ರಯಾಣ.
- ಮಾರ್ಗ ಮಧ್ಯೆ ಸಂಗೊಳ್ಳಿ ರಾಯಣ್ಣ ವೃತ್ತ, ಸೌತ್ ಎಂಡ್ ವೃತ್ತ ಮತ್ತು ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಪ್ರಧಾನಿಗೆ ಬಿಜೆಪಿ ಕಾರ್ಯಕರ್ತರ ಸ್ವಾಗತ.
- ಬೆಳಗ್ಗೆ 11.45ಕ್ಕೆ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ಆಗಮನ.
- ಬೆಳಗ್ಗೆ 11.45ರಿಂದ ಮಧ್ಯಾಹ್ನ 12.50ರವರೆಗೆ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣ
- ಮಧ್ಯಾಹ್ನ 12.50ಕ್ಕೆ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣಕ್ಕೆ ಆಗಮನ.
- ಮಧ್ಯಾಹ್ನ 12.55ಕ್ಕೆ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಐಐಐಟಿ ಸಭಾಂಗಣಕ್ಕೆ ಆಗಮನ.
- ಮಧ್ಯಾಹ್ನ 1 ಗಂಟೆಗೆ ಸಭಾ ಕಾರ್ಯಕ್ರಮದ ವೇದಿಕೆಗೆ ಪ್ರಧಾನಿ ಆಗಮನ.
- ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಐಐಐಟಿ ಆಡಿಟೋರಿಯಂನಲ್ಲಿ ಸಭಾ ಕಾರ್ಯಕ್ರಮ.
- ಮಧ್ಯಾಹ್ನ 1.25ಕ್ಕೆ ಆರ್ ವಿ ರಸ್ತೆಯಿಂದ ಬೊಮ್ಮಸಂದ್ರದವರೆಗಿನ ಹಳದಿ ಮಾರ್ಗ ಉದ್ಘಾಟನೆ ಮತ್ತು ಮೆಟ್ರೋ 3ನೇ ಹಂತದ ಕಾಮಗಾರಿಗೆ ಶಂಕುಸ್ಥಾಪನೆ.
- ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಪ್ರಧಾನಿ ಮೋದಿ ಭಾಷಣ.
- ಮಧ್ಯಾಹ್ನ 2.05ಕ್ಕೆ ಕಾರ್ಯಕ್ರಮದ ವೇದಿಕೆಯಿಂದ ಪ್ರಧಾನಿ ನಿರ್ಗಮನ
- ಮಧ್ಯಾಹ್ನ 2.15ಕ್ಕೆ ರಸ್ತೆ ಮಾರ್ಗವಾಗಿ ಹೆಲಿಪ್ಯಾಡ್ ಗೆ ಆಗಮನ
- ಮಧ್ಯಾಹ್ನ 2.20ಕ್ಕೆ ಹೆಲಿಕಾಫ್ಟರ್ ಮೂಲಕ ಹೆಚ್‌ಎಎಲ್ ಏರ್ ಪೋರ್ಟ್ ಗೆ ನಿರ್ಗಮನ
- ಮಧ್ಯಾಹ್ನ 2.40ಕ್ಕೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ನವದೆಹಲಿಗೆ ಪ್ರಧಾನಿ ನರೇಂದ್ರ ಮೋದಿ ನಿರ್ಗಮನ.
- https://www.newsics.com/2025/08/09/aishwarya-rai-bachchan-worth-rs-900-crore-how-rich-is-aishwarya-rai-bachchan/