Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಮೆರಿಕದ 45 ರಾಜ್ಯದಲ್ಲಿ ಕೋವಿಡ್ ವೈರಸ್ ಸ್ಫೋಟ
ಪ್ರಮುಖವಿದೇಶ

ಅಮೆರಿಕದ 45 ರಾಜ್ಯದಲ್ಲಿ ಕೋವಿಡ್ ವೈರಸ್ ಸ್ಫೋಟ

Share
2 Min Read
SHARE

newsics.com

ನ್ಯೂಯಾರ್ಕ: ಅಮೆರಿಕ ಇದೀಗ ಬಹುತೇಕ ರಾಷ್ಟ್ರದ ಮೇಲಿನ ತೆರಿಗೆ ನೀತಿಯನ್ನು ಪರಿಷ್ಕರಣೆಗೊಳಿಸಿದೆ. ಈ ಪೈಕಿ ತನ್ನ ಆಪ್ತ, ತನ್ನ ತಾಳಕ್ಕೆ ತಕ್ಕಂತೆ ಕುಣಿಯುವ ದೇಶಗಳಿಗೆ ಕಡಿಮೆ ತೆರಿಗೆ ವಿಧಿಸಿದ್ದರೆ, ದೈತ್ಯ ಶಕ್ತಿಯಾಗಿ ಬೆಳೆಯುವ ರಾಷ್ಟ್ರಗಳಿಗೆ ದುಬಾರಿ ತೆರಿಗೆ ವಿಧಿಸಿದೆ.

ಭಾರತದ ಮೇಲೆ ಶೇಕಡಾ 50 ರಷ್ಟು ತೆರಿಗೆ ವಿಧಿಸಲಾಗಿದೆ. ಕೆಲ ಉತ್ಪನ್ನಗಳ ಮೇಲೆ ಶೇಕಡಾ 63ರಷ್ಟು ತೆರಿಗೆ ವಿಧಿಸಿದ್ದಾರೆ. ಈ ಬೆಳವಣಿಗೆ ನಡುವೆ ಅಮೆರಿಕಗೆ ಹೊಸ ಸಂಕಷ್ಟ ಎದುರಾಗಿದೆ. ಅಮೆರಿಕದಲ್ಲಿ ಇದೀಗ ಕೋವಿಡ್ ವೈರಸ್ ಸ್ಫೋಟಗೊಂಡಿದೆ. ಪ್ರಮುಖವಾಗಿ ಪಶ್ಚಿಮ ಅಮರೆಕದಲ್ಲಿ ಕೋವಿಡ್ ಸ್ಫೋಟಗೊಂಡಿದ್ದು, ಮಾರ್ಗಸೂಚಿ ಹೊರಡಿಸಲಾಗಿದೆ.

ಅಮೆರಿಕದ ಸೆಂಟರ್ ಫಾರ್ ಡೀಸಿಸ್ ಕಂಟ್ರೋಲ್ ಆಯಂಡ್ ಪ್ರಿವೆನ್ಶನ್ ಕೇಂದ್ರ ಕೋವಿಡ್ ಮಾಹಿತಿ ನೀಡಿದೆ. ಕಳೆದ ವಾರದ ಅಮೆರಿಕದಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ನಿಧಾನವಾಗಿ ಏರಿಕೆಯಾಗಿತ್ತು. ಆದರೆ ಈ ವಾರ ಒಂದೇ ಸಮನೇ ಏರಿಕೆಯಾಗಿದೆ. ಅಲಸ್ಕಾ, ಕ್ಯಾಲಿಫೋರ್ನಿಯಾ, ಕೊಲರ್ಯಾಡೋ, ನಿವೆಡಾ, ಉಟ್ಹ ಸೇರಿದಂತೆ ಪಶ್ಚಿಮ ಅಮೆರಿಕದಲ್ಲಿ ಕೋವಿಡ್ ದಿಢೀರ್ ಏರಿಕೆಯಾಗಿದೆ. 45 ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದೆ ಎಂದು ಸಿಡಿಸಿ ಹೇಳಿದೆ. ಕಳೆದ ವಾರ 40 ರಾಜ್ಯದಲ್ಲಿ ಪತ್ತೆಯಾಗಿತ್ತು.

ಈ ಬಾರಿ ಕೋವಿಡ್ ಪ್ರಕರಣ ಹೆಚ್ಚಾಗಿ ಮಕ್ಕಳಲ್ಲಿ ಪತ್ತೆಯಾಗುತ್ತಿದೆ. ಅದರಲ್ಲೂ ನಾಲ್ಕು ವರ್ಷದ ಮಕ್ಕಳಲ್ಲಿ ತೀವ್ರ ಪರಿಣಾಮ ಬೀರುತ್ತಿದೆ. ಇಡೀ ಅಮೆರಿಕದಲ್ಲಿ ಪ್ರಕರಣ ಸಂಖ್ಯೆಗೆ ಹೋಲಿಸಿದರೆ ಕಡಿಮೆ ಇದೆ. ಆದರೆ ಪ್ರತಿ ರಾಜ್ಯದಲ್ಲಿ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ ಎಂದಿದೆ. ಪೋಷಕರು ತೀವ್ರ ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.

ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿರುವ ಕಾರಣ ಜ್ವರ, ಕೆಮ್ಮು, ಶೀತ ಸೇರಿದಂತೆ ಕೋವಿಡ್ ಗುಣಲಕ್ಷ್ಮಗಳು ಕಂಡು ಬಂದಲ್ಲಿ ತಕ್ಷಣವೇ ವೈದ್ಯರ ಸಂಪರ್ಕಿಸಲು ಸಿಡಿಸಿ ಸೂಚಿಸಿದೆ. ಕೋವಿಡ್ ಪ್ರಕರಣ ಸಂಬಂಧ 45 ರಾಜ್ಯಗಳಲ್ಲಿ ಟೆಸ್ಟಿಂಗ್, ಸೂಕ್ತ ಚಿಕಿತ್ಸೆಗೆ ಸೂಚಿಸಲಾಗಿದೆ.

ಈ ಬಾರಿ ಅಮೆರಿಕದಲ್ಲಿ ಕೋವಿಡ್ NB.1.8.1 ವೇರಿಯೆಂಟ್ ಅಥವಾ ನಿಂಬಸ್ ವೇರಿಯೆಂಟ್ ಕಾಣಿಸಿಕೊಂಡಿದೆ. ಈ ವೇರಿಯೆಂಟ್ ಅತೀ ವೇಗವಾಗಿ ಹರಡುತ್ತಿದೆ. ಇದರ ಗುಣಲಕ್ಷಣಗಳಲ್ಲಿ ಅತೀ ವೇಗವಾಗಿ ಹರಡುವಿಕೆ ಒಂದಾಗಿದೆ. ಸದ್ಯ ಹಲವು ಪ್ರಕರಣಗಳು ಮೈಲ್ಡ್ ಕೇಸ್ ಆಗಿವೆ ಎಂದು ಸಿಡಿಸಿ ಹೇಳಿದೆ. ಯಾರು ಆತಂಕಪಡುವ ಅಗತ್ಯವಿಲ್ಲ.ಗುಣಲಕ್ಷಣಗಳಿದ್ದರೆ ವೈದ್ಯರ ಸಂಪರ್ಕಿಸಲು ಸೂಚಿಸಿದೆ. ಆಸ್ಪತ್ರೆ ದಾಖಲಾಗುತ್ತಿರುವ ಪ್ರಮಾಣ ಕಡಿಮೆ ಇದೆ ಎಂದು ವೈದ್ಯರು ಹೇಳಿದ್ದಾರೆ.

ಕೋವಿಡ್ ಮಾರ್ಗಸೂಚಿ ಪಾಲಿಸಲು ಸೂಚನೆ
ಅಮೆರಿಕದ 45 ರಾಜ್ಯಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲಿಸಲು ಸೂಚಿಸಲಾಗಿದೆ. ಮುಂಜಾಗ್ರತೆ ವಹಿಸಲು ನಿರ್ದೇಶ ನೀಡಲಾಗಿದೆ. ಇದೇ ವೇಳೆ ವಯಸ್ಕರು, ಹಿರಿಯ ನಾಗರೀಕರು ಕೋವಿಡ್ ವ್ಯಾಕ್ಸಿನ್ ಪಡೆದಿದ್ದರೆ, ತಕ್ಷಣವೇ ಪಡೆಯಲು ಸೂಚಿಸಿದೆ. ಇದೇ ವೇಳೆ ಬೂಸ್ಟರ್ ಡೋಸ್ ಕೂಡ ಲಭ್ಯವಿದೆ ಎಂದು ಸಿಡಿಸಿ ಹೇಳಿದೆ.

PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ

TAGGED:Covid virus outbreak in 45 US states
Share This Article
Facebook Twitter Copy Link Print
Previous Article SEP recommendation ರಾಜ್ಯದಲ್ಲಿ ಎನ್ಇಪಿ ಬದಲು ಎಸ್ಇಪಿ: 4 ವರ್ಷದ ಪದವಿ ರದ್ದು ಶಿಫಾರಸು
Next Article ದೇಶದ ಕ್ಷಮೆ ಕೇಳಿ; ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ಸೂಚನೆ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?