newsics.com
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದಾರೆ. ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ.
ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಇದೇ ವೇಳೆ ಎರಡು ಉತ್ತರ ಭಾರತ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
Fire Accident ವಾರಣಾಸಿಯ ದೇವಸ್ಥಾನದಲ್ಲಿ ಬೆಂಕಿ ಅವಘಡ : 7 ಮಂದಿ ಸಾವು