Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಾಂತ್ರಿಕ ದೋಷ: ಕೆ.ಸಿ. ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ಗ್ರೇಟ್ ಎಸ್ಕೇಪ್
ದೇಶಪ್ರಮುಖ

ತಾಂತ್ರಿಕ ದೋಷ: ಕೆ.ಸಿ. ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ಗ್ರೇಟ್ ಎಸ್ಕೇಪ್

Share
2 Min Read
SHARE

newsics.com

ನವದೆಹಲಿ: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿ ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದೆ.

ಪ್ರತಿಕೂಲ ಹವಾಮಾನದ ನಡುವೆ ತಿರುವನಂತಪುರಂನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಶಂಕಿತ ತಾಂತ್ರಿಕ ದೋಷ ಕಂಡುಬಂದ ನಂತರ ಚೆನ್ನೈಗೆ ತಿರುಗಿಸಲಾಯಿತು.

ಏರ್ ಇಂಡಿಯಾ AI2455 ವಿಮಾನ ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ವಿಮಾನವನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ.

ಭಾನುವಾರ (ಆಗಸ್ಟ್ 10) ತಿರುವನಂತಪುರಂನಿಂದ ದೆಹಲಿಗೆ ಕಾರ್ಯನಿರ್ವಹಿಸುತ್ತಿದ್ದ AI2455 ವಿಮಾನದ ಸಿಬ್ಬಂದಿ ಶಂಕಿತ ತಾಂತ್ರಿಕ ಸಮಸ್ಯೆಯಿಂದಾಗಿ ಮತ್ತು ಮಾರ್ಗಮಧ್ಯೆ ಹವಾಮಾನ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ಚೆನ್ನೈಗೆ ಮುನ್ನೆಚ್ಚರಿಕೆ ಮಾರ್ಗ ಬದಲಾವಣೆ ಮಾಡಲಾಯಿತು. ವಿಮಾನವು ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿಯಿತು. ಅಲ್ಲಿ ವಿಮಾನವನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಯಿತು.

ತೊಂದರೆಗೊಳಗಾದ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ.

ಈ ಘಟನೆಯನ್ನು ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಅವರು ದುಃಖಕರ ಪ್ರಯಾಣ ಎಂದು ತಿಳಿಸಿದ್ದಾರೆ.

ತಿರುವನಂತಪುರದಿಂದ ದೆಹಲಿಗೆ ಹೊರಟ ಏರ್ ಇಂಡಿಯಾ ವಿಮಾನ AI 2455 ಭಾನುವಾರ ದುರಂತದ ಹತ್ತಿರಕ್ಕೆ ಬಂದಿತ್ತು. ನಾನು, ಹಲವು ಸಂಸದರು ಮತ್ತು ನೂರಾರು ಪ್ರಯಾಣಿಕರು ಇದ್ದೆವು. ಟೇಕ್ ಆಫ್ ಆದ ಸುಮಾರು ಒಂದು ಗಂಟೆಯ ನಂತರ ಕ್ಯಾಪ್ಟನ್ ವಿಮಾನ ಸಿಗ್ನಲ್ ದೋಷವನ್ನು ಘೋಷಿಸಿದರು. ಚೆನ್ನೈಗೆ ವಿಮಾನ ತಿರುಗಿಸಿದರು. ಸುಮಾರು ಎರಡು ಗಂಟೆ ಕಾಲ ನಾವು ಇಳಿಯಲು ಅನುಮತಿಗಾಗಿ ಕಾಯುತ್ತಾ ವಿಮಾನ ನಿಲ್ದಾಣವನ್ನು ಸುತ್ತುತ್ತಿದ್ದೆವು.

ವಿಮಾನವನ್ನು ಪೈಲಟ್ ಚೆನ್ನೈ ಕಡೆಗೆ ತಿರುಗಿಸಿದ್ದು, ಚೆನ್ನೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಇಳಿಯುತ್ತಿದ್ದಾಗ ಏರ್ಪೋರ್ಟ್ ನ ಅದೇ ರನ್ ವೇನಲ್ಲಿ ಮತ್ತೊಂದು ವಿಮಾನ ಇತ್ತು. ಇದರಿಂದ ಅತ್ಯಂತ ಕ್ಷಿಪ್ರವಾಗಿ ಪೈಲಟ್ ವಿಮಾನವನ್ನು ಮೇಲಕ್ಕೆ ಎತ್ತಿದ್ದಾರೆ. ಪೈಲಟ್ ಸಮಯಪ್ರಜ್ಞೆಯಿಂದಾಗಿ ಎಲ್ಲರ ಜೀವ ಉಳಿದಿದೆ. ಮತ್ತೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ

ಕ್ಯಾಪ್ಟನ್ ಕೌಶಲ್ಯ ಮತ್ತು ಅದೃಷ್ಟದಿಂದ ನಾವು ಪಾರಾಗಿದ್ದೇವೆ. ಪ್ರಯಾಣಿಕರ ಸುರಕ್ಷತೆಯು ಅದೃಷ್ಟವನ್ನು ಅವಲಂಬಿಸಲು ಸಾಧ್ಯವಿಲ್ಲ. ಈ ಘಟನೆಯನ್ನು ತುರ್ತಾಗಿ ತನಿಖೆ ಮಾಡಿ, ಹೊಣೆಗಾರಿಕೆಯನ್ನು ಸರಿಪಡಿಸಿ, ಇಂತಹ ಲೋಪಗಳು ಮತ್ತೆಂದೂ ಸಂಭವಿಸದಂತೆ ನೋಡಿಕೊಳ್ಳಬೇಕೆಂದು ವೇಣುಗೋಪಾಲ್ ಒತ್ತಾಯಿಸಿದ್ದಾರೆ.

https://x.com/kcvenugopalmp/status/1954611946663383238?t=5-6A6ib12Aiu1cB0cJd-wQ&s=19

TAGGED:Technical Foul: K.C. Venugopal's Air India Flight Great Escape
Share This Article
Facebook Twitter Copy Link Print
Previous Article Vastu Tips | ಈ ವಸ್ತುಗಳನ್ನು ಬೇರೆಯವರಿಗೆ ಕೊಡದಿರಿ, ಬೇರೆಯವರಿಂದ ಪಡೆಯಲೂಬೇಡಿ…
Next Article Rail one ಇನ್ಮುಂದೆ ರೈಲು ಪ್ರಯಾಣ ವೇಳೆ OTTಯಲ್ಲಿ ಉಚಿತವಾಗಿ ಸಿನಿಮಾ ನೋಡಬಹುದು!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?