newsics.com
ಚಾಮರಾಜನಗರ: ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಜತೆ ಫೋಟೊ ಕ್ಲಿಕ್ಕಿಸಲು ಹೋಗಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅರಣ್ಯ ಇಲಾಖೆ ದಂಡ ವಿಧಿಸಿದೆ.
ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವರಿಗೆ 25 ಸಾವಿರ ರೂಪಾಯಿ ದಂಡ ಹಾಕಲಾಗಿದೆ.
ಆಹಾರ ಅರಸಿ ರಸ್ತೆಗಿಳಿದಿದ್ದ ಕಾಡಾನೆ ಲಾರಿಯಿಂದ ಕ್ಯಾರೆಟ್ ಚೀಲ ಕಿತ್ತು ತಿನ್ನುತ್ತಿದ್ದಾಗ ಬಸವರಾಜು ಕಾರಿನಿಂದ ಇಳಿದು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದರು. ಈ ವೇಳೆ, ರೊಚ್ಚಿಗೆದ್ದ ಕಾಡಾನೆ ಬಸವರಾಜು ಅವರನ್ನು ಅಟ್ಟಾಡಿಸಿ ತುಳಿಯಲು ಯತ್ನಿಸಿತ್ತು. ಅದೃಷ್ಟವಶಾತ್, ಕೊಂಚದರಲ್ಲೇ ಪಾರಾಗಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ಲಾಗಿತ್ತು.
ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದಂತೆ ಎಚ್ಚೆತ್ತ ಬಂಡೀಪುರ ಅರಣ್ಯ ಇಲಾಖೆ ಬಸವರಾಜು ಅವರ ವಿಳಾಸವನ್ನು ಪತ್ತೆ ಹಚ್ಚಿ ಕರೆತಂದು ಮುಚ್ಚಳಿಕೆ ಬರೆಸಿಕೊಂಡು, ದಂಡ ವಿಧಿಸಿ ಬಿಸಿ ಮುಟ್ಟಿಸಿದ್ದಾರೆ.
Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!
KN Rajanna ಸಚಿವ ಸಂಪುಟದಿಂದ ಕೆಎನ್ ರಾಜಣ್ಣ ವಜಾ; ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?