newsics.com
ಹನ್ನೆರಡು ವರ್ಷದ ಬಾಲಕಿ ಮೇಲೆ ಸುಮಾರು 200 ಪುರುಷರು ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಇಂಥ ಅಮಾನವೀಯ ಕೃತ್ಯ ಎಸಗಿದ 10 ಮಂದಿಯನ್ನು ಬಂಧಿಸಲಾಗಿದೆ. ಗುಜರಾತ್ನ ನಾಡಿಯಾಡ್ನಲ್ಲಿ ಈ ಘಟನೆ ನಡೆದಿದೆ.
ಮುಂಬೈ ಸಮೀಪದ ವಸೈನಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ 12 ವರ್ಷದ ಬಾಂಗ್ಲಾದೇಶಿ ಬಾಲಕಿಯ ಮೇಲೆ ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಎಂದು ಬಾಲಕಿ ಹೇಳಿಕೊಂಡಿದ್ದಾಳೆ.
ಶಾಲೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದ ಬಾಲಕಿ ತನ್ನ ಪೋಷಕರಿಗೆ ಹೆದರಿ ತನಗೆ ಪರಿಚಯದ ಮಹಿಳೆಯೊಂದಿಗೆ ಭಾರತಕ್ಕೆ ಬಂದಿದ್ದಳು. ಆ ಮಹಿಳೆಯೇ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದಳು ಎಂದು ಆರೋಪಿಸಲಾಗಿದೆ.
ಮಹಿಳೆ ಬಾಲಕಿಯನ್ನು ಮೊದಲು ಗುಜರಾತ್ನ ನಡಿಯಾಡ್ಗೆ ಕರೆದೊಯ್ದು ಅಲ್ಲಿ ಮೂರು ತಿಂಗಳ ಅವಧಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಪುರುಷರ ಲೈಂಗಿಕ ದೌರ್ಜನ್ಯಕ್ಕೆ ಬಲಿಪಶುವಾಗುವಂತೆ ಮಾಡಿದ್ದಳು ಎಂದು ಬಾಲಕಿ ಹೇಳಿಕೊಂಡಿದ್ದಾಳೆ.
ಮೀರಾ-ಭಾಯಂದರ್ ವಸೈ-ವಿರಾರ್ (MBVV) ಪೊಲೀಸ್ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು ಜುಲೈ 26, 2025 ರಂದು ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.
ಈ ಜಾಲದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಹಾರ್ಮನಿ ಫೌಂಡೇಶನ್ ಸಂಸ್ಥಾಪಕ ಅಬ್ರಹಾಂ ಮಥಾಯ್ ಒತ್ತಾಯಿಸಿದ್ದಾರೆ.
ಪೊಲೀಸ್ ಆಯುಕ್ತ ನಿಕೇತ್ ಕೌಶಿಕ್ ಅವರು ಈ ಸಂಪೂರ್ಣ ಜಾಲವನ್ನು ಬಯಲು ಮಾಡಲು ಈ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!