newsics.com
ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಕಳೆದ 5-6 ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಹಣದ ಅಗತ್ಯವಿದೆ ಎಂದು ಹೇಲಿಕೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಸಂತ, ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ, ರಿಯಲ್ ಸ್ಟಾರ್ ಉಪೇಂದ್ರ ನಟನೆಯ ನಾಗರಹಾವು ಸಿನಿಮಾಗಳು ಸಿನಿಪ್ರಿಯರಿಗೆ ಗೊತ್ತು. ಹೀಗೆ ಹಲವು ಸಿನಿಮಾಗಳನ್ನು ಕನ್ನಡ ಚಿತ್ರರಂಗ ಹಾಗೂ ಚಿತ್ರರಸಿಕರಿಗೆ ಕೊಟ್ಟಿರುವವರು ನಿರ್ದೇಶಕರಾದ ಎಸ್ ಮುರಳಿ ಮೋಹನ್ ಅವರು. ಸತತ 36 ವರ್ಷಗಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.
https://www.newsics.com/2025/08/13/do-snakes-lurk-near-houses-during-the-rainy-season/