newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದ್ದು, ದರ್ಶನ್ ಅವರ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಡೆವಿಲ್ ನಟ ದರ್ಶನ್ ಅವರು ಸಿನಿಮಾದ ಶೂಟಿಂಗ್ ಹೇಗೋ ಮುಗಿಸಿಕೊಳ್ಳುತ್ತಾ ಮೊದಲ ಹಾಡಿನ ಬಿಡುಗಡೆಯ ಸಿದ್ಧತೆಯಲ್ಲಿ ಇದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ ಆರೋಪಗಳು ದಾಖಲಾಗಿವೆ. ಚಿತ್ರದುರ್ಗ ಮೂಲದ 33 ವರ್ಷದ ರೇಣುಕಾಸ್ವಾಮಿಯನ್ನು ಅಪಹರಿಸಿ, ಬೆಂಗಳೂರಿನ ಶೆಡ್‌ನಲ್ಲಿ ಮೂರು ದಿನಗಳ ಕಾಲ ಬಂಧಿಸಿ, ಚಿತ್ರಹಿಂಸೆ ನೀಡಿ, ಬಳಿಕ ಅವರ ಶವವನ್ನು ಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
https://www.newsics.com/2025/08/13/snake-found-in-puff-pastry-brought-from-bakery/