Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ
ಕರ್ನಾಟಕಪ್ರಮುಖ

Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

Share
1 Min Read
SHARE

newsics.com
ಕಲಬುರಗಿ: ಇಲ್ಲಿನ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪಾ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಆ.14) ರಾತ್ರಿ 9:20ರ ಸುಮಾರಿಗೆ ಲಿಂಗೈಕ್ಯರಾದರು.

ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರಿಗೆ ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರಿದ್ದಾರೆ.

ಶರಣಬಸಪ್ಪ ಅಪ್ಪಾ ಅವರು ಕಳೆದ ತಿಂಗಳು ಜುಲೈ 26 ರಂದು ವಯೋಸಹಜ ಕಾಯಿಲೆ ಮತ್ತು ನ್ಯುಮೋನಿಯಾ ಚಿಕಿತ್ಸೆಗಾಗಿ ಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು.

ಗುರುವಾರ (ಆ.14) ಡಾ.ಶರಣಬಸಪ್ಪ ಅಪ್ಪ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಶರಣಬಸವೇಶ್ವರ ಮಠಕ್ಕೆ ಶಿಫ್ಟ್‌ ಮಾಡಲಾಗಿತ್ತು. ಮಠಕ್ಕೆ ಶಿಫ್ಟ್‌ ಆಗುತ್ತಿದ್ದಂತೆ ಡಾ.ಶರಣಬಸಪ್ಪ ಅಪ್ಪ ಲಿಂಗೈಕ್ಯರಾಗಿದ್ದಾರೆ.

ಡಾ. ಶ್ರೀ ಶರಣಬಸಪ್ಪ ಅಪ್ಪ ಅವರು ಕಲಬುರಗಿಯಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರುವಾಸಿಯಾಗಿದ್ದರು. ಶರಣಬಸವೇಶ್ವರ ಸಂಸ್ಥಾನ ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿ ದಾಸೋಹ ವ್ಯವಸ್ಥೆಗೆ ಹೆಸರುವಾಸಿಯಾಗಿದೆ. ಡಾ. ಶ್ರೀ ಶರಣಬಸಪ್ಪ ಅವರು 1988ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.
ಸಾರ್ವಜನಿಕರಿಗೆ ಅಂತಿಮ ದರ್ಶನ ವ್ಯವಸ್ಥೆ ಮಾಡಲು ಕುಟುಂಬಸ್ಥರ ಜತೆ ಸಮಾಲೋಚನೆ‌ ನಡೆಸಿ ತಿಳಿಸಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ತಿಳಿಸಿದ್ದಾರೆ.

Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ

TAGGED:Presiding Officer of Sharanbasaveshwara Sansthan MathShri Sharanbasappa Appa Lingaykya
Share This Article
Facebook Twitter Copy Link Print
Previous Article Uttaradi Matha waterlogged ಕಲಬುರಗಿಯಲ್ಲಿ ಭಾರೀ ಮಳೆ: ಉತ್ತರಾದಿಮಠ ಜಲಾವೃತ, ನಿಲ್ಲದ‌ ಪೂಜೆ, ವಿಡಿಯೋ ನೋಡಿ
Next Article ‘ನವ ಭಾರತ’ಕ್ಕೆ ಇಂದು 79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ, ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ‌ ಮಾತು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?