newsics.com
ಸೂಪರ್‌ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ‘ಕೂಲಿ’ ಸಿನಿಮಾ ಆಗಸ್ಟ್ 14ರಂದು ವಿಶ್ವಾದ್ಯಂತ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದೆ. ಮೊದಲ ದಿನ ಹೌಸ್ ಫುಲ್ ಪ್ರದರ್ಶನ ಕಂಡಿದ್ದು, ವಿಶ್ವದಾದ್ಯಂತ ದಿನದ ಗಳಿಕೆ ಸುಮಾರು 130 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಭಾರತದಲ್ಲಿ ಸುಮಾರು 53 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದ ‘ಕೂಲಿ’ ಸಿನಿಮಾ ಕರ್ನಾಟಕದಲ್ಲಿಯೂ ಮೊದಲ ದಿನ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಟಿಕೆಟ್ ದರ ಭಾರಿ ಏರಿಕೆಯಾಗಿದ್ದರೂ ರಜನಿಕಾಂತ್ ಅಭಿಮಾನಿಗಳು ಮೊದಲ ದಿನವೇ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ.
ಚೆನ್ನೈನಲ್ಲಿ ಗರಿಷ್ಠ 4500 ರೂ.ವರೆಗೂ ಟಿಕೆಟ್ ಮಾರಾಟವಾಗಿದೆ. ಬೆಂಗಳೂರಿನಲ್ಲಿ 2500ರೂ. ವರೆಗೂ ಟಿಕೆಟ್ ಮಾರಾಟವಾಗಿದೆ. ಆದರೂ ಅಷ್ಟು ಟಿಕೆಟ್ ಗಳು ಎಲ್ಲೆಡೆ ಹೌಸ್ ಫುಲ್ ಪ್ರದರ್ಶನ ಕಂಡಿವೆ. ಬೆಂಗಳೂರಿನಲ್ಲಿ ಒಟ್ಟು 905 ಶೋಗಳು, ರಾಜ್ಯಾದ್ಯಂತ ಕೂಲಿ ಚಿತ್ರದ 1800ಕ್ಕೂ ಅಧಿಕ ಪ್ರದರ್ಶನ ಕಂಡಿದೆ.
https://www.newsics.com/2025/08/15/mother-kills-3-year-old-son-and-commits-suicide/