Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ
ದೇಶಪ್ರಮುಖ

Vice Presidential Election ಉಪ ರಾಷ್ಟ್ರಪತಿ ಚುನಾವಣೆ: ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಎನ್‌ಡಿಎ ಅಭ್ಯರ್ಥಿ

Share
1 Min Read
SHARE

newsics.com

ನವದೆಹಲಿ: ಸದ್ಯದಲ್ಲೇ ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.

ಭಾನುವಾರ ಸಂಜೆ ದೆಹಲಿಯಲ್ಲಿ ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿಸಲು ತೀರ್ಮಾನ ಕೈಗೊಳ್ಳಲಾಯಿತು.

ಸೆ.9ರಂದು ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗವು ಈಗಾಗಲೇ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದ್ದು, ಚುನಾವಣಾ ಪ್ರಕ್ರಿಯೆಯನ್ನೂ ಆರಂಭಿಸಿದೆ.

ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್ಕರ್ ಅವರು ಕಳೆದ ಜು. 21ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ಈವರೆಗೆ ಉಪರಾಷ್ಟ್ರಪತಿಯಾಗಿದ್ದ ಜಗದೀಪ್ ಧನ್ಖರ್ ರಾಜೀನಾಮೆ ಹಿನ್ನೆಲೆಯಲ್ಲಿ ದೇಶದ 2ನೇ ಅತಿ ದೊಡ್ಡ ಸಾಂವಿಧಾನಿಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜಗದೀಪ್ ಧನ್ಕರ್ ಅವರು 2022ರ ಆ. 11ರಂದು ಭಾರತದ ಉಪ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಅವರ ಅಧಿಕಾರಾವಧಿ 2027ರ ಆ.10ರವರೆಗೆ ಇತ್ತು. ಆದರೆ, ಅವರು ಅನಾರೋಗ್ಯದ ಕಾರಣ ನೀಡಿ ಇದೇ ಜುಲೈ 21ರಂದು ಪದತ್ಯಾಗ ಮಾಡಿದ್ದಾರೆ.

ರಾಧಾಕೃಷ್ಣನ್ ಯಾರು?

ಮೂಲತಃ ತಮಿಳುನಾಡಿನವರಾದ ರಾಧಾಕೃಷ್ಣನ್ ಅವರು, 1957ರ ಅ. 20ರಂದು, ಆಗಿನ ಮದ್ರಾಸ್ ಪ್ರಾಂತ್ಯದಲ್ಲಿದ್ದ ತಿರುಪ್ಪೂರ್ ನಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್. ತಮ್ಮ ವಿದ್ಯಾರ್ಥಿ ದೆಸೆಯಿಂದಲೇ ಆರೆಸ್ಸೆಸ್ ಜತೆ ನಂಟು ಬೆಳೆಸಿಕೊಂಡಿದ್ದ ಅವರು ಬಳಿಕ ಬಿಜೆಪಿಯ ಹಿಂದಿನ ಪಕ್ಷವಾಗಿದ್ದ ಜನಸಂಘಕ್ಕೆ ಕಾಲಿಟ್ಟಿದ್ದರು. ತಮಿಳುನಾಡಿನಲ್ಲಿ ಬಿಜೆಪಿಯನ್ನು ತಕ್ಕಮಟ್ಟಿಗೆ ಪ್ರಸಿದ್ಧಿಗೆ ತಂದ ಹಿರಿಮೆ ಇವರಿಗಿದೆ. 2003ರಿಂದ 2006ರವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು. 1998 ಹಾಗೂ 1999ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ಕೊಯಮತ್ತೂರಿನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯ ಗಳಿಸಿದ್ದರು.

ಮತಗಳವು ಆರೋಪ ಸಾಬೀತಿಗೆ ರಾಹುಲ್‌ಗೆ 7 ದಿನದ ಗಡುವು ನೀಡಿದ ಚುನಾವಣಾ ಆಯೋಗ

TAGGED:Vice Presidential Election: Maharashtra Governor C.P. Radhakrishnan is NDA's candidate
Share This Article
Facebook Twitter Copy Link Print
Previous Article GIRLS MISSING ಶಿರಸಿಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಕಾಣೆ
Next Article Little Ganesha ready to take off! ವಿಮಾನವೇರಲು ಸಿದ್ಧನಾದ ಪುಟ್ಟ ಗಣಪ! ಮಂಗಳೂರಲ್ಲಿ ತಯಾರಿ, ಕ್ಯಾಲಿಫೋರ್ನಿಯಾದಲ್ಲಿ ಪೂಜೆ!

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?