newsics.com
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್‌ರನ್ನು ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ವಿಚಾರ ಸಂಬಂಧ ಸಿಸಿಎಚ್ 64ರಲ್ಲಿ ವಿಚಾರಣೆ ನಡೆಸಿ, ಆ.23ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಎಸ್ಪಿಪಿ ಪ್ರಸನ್ನ ಕುಮಾರ್ ಅವರಿಂದ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಕೆಯಾಗಿದ್ದು ಐವರು ಆರೋಪಿಗಳ ಶಿಫ್ಟ್ ಮಾಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಜೈಲು ಅಧಿಕಾರಿಗಳ ಪರವಾಗಿ ಎಸ್ಪಿಪಿ ಅರ್ಜಿ ಸಲ್ಲಿಸಿದ್ದು 57ನೇ ಸೆಷನ್ಸ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಮಧ್ಯಾಹ್ನ 3ಗಂಟೆ ಅರ್ಜಿ ವಿಚಾರಣೆ ನಡೆದಿದ್ದು 64ನೇ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಿಚಾರಣೆ ನಡೆದಿದೆ.
ಅರ್ಜಿಯಲ್ಲಿ, ಜೈಲು ಭದ್ರತೆ, ಆರೋಪಿಗಳ ನಡುವಿನ ಯಾವುದೇ ಸಂಪರ್ಕ ತಪ್ಪಿಸುವುದು ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ ಕ್ರಮ ಕೈಗೊಳ್ಳುವುದು ಮುಖ್ಯ ಉದ್ದೇಶವಾಗಿದೆ. ಜಾಮೀನು ಪಡೆಯುವ ಸಂದರ್ಭದಲ್ಲಿ ಆರೋಪಿಗಳು ಯಾವ ಜೈಲಿನಲ್ಲಿ ಇದ್ದರೋ, ಅವರನ್ನು ಅಲ್ಲಿ ಶಿಫ್ಟ್ ಮಾಡುವಂತೆ ವಿಶೇಷ ಮನವಿ ಸಲ್ಲಿಸಲಾಗಿದೆ
ಕೋರ್ಟ್ ಸದ್ಯ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ. ಆರೋಪಿಗಳ ಪರ ವಕೀಲರು ಆಕ್ಷೇಪಣೆ ಇದ್ದರೆ ಸಲ್ಲಿಸುವಂತೆ ಕೋರ್ಟ್ ಸೂಚಿಸಿದೆ. 23ನೇ ತಾರೀಕಿಗೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚಿಸಿದೆ.
https://www.newsics.com/2025/08/18/arrest-warrant-issued-against-bollywood-singer-lucky-ali/