newsics.com
ಹುಬ್ಬಳ್ಳಿ: ಆಗಸ್ಟ್ 24ರಂದು ಅರಸೀಕೆರೆ-ಬಾಣಾವರ ಹಾಗೂ ಅರಸೀಕೆರೆ-ಹಬ್ಬನಘಟ್ಟ ನಿಲ್ದಾಣಗಳ ನಡುವೆ ಪ್ರಮುಖ ಸಿಗ್ನಲಿಂಗ್ ಮತ್ತು ಬ್ಲಾಕ್ ಇನ್ಸ್ಟ್ರುಮೆಂಟ್ ಬದಲಾವಣೆ ಕಾಮಗಾರಿಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ, ಅಂದು ಕೆಲವು ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ. ಇನ್ನು ಕೆಲವು ರೈಲುಗಳ ಸಂಚಾರ ಭಾಗಶಃ ರದ್ದುಗೊಳಿಸಲಾಗಿದೆ.
ಕೆಲವು ರೈಲುಗಳ ಪ್ರಯಾಣದ ಸಮಯ ಮರು ನಿಗದಿಪಡಿಸಲಾಗುತ್ತದೆ ಮತ್ತು ನಿಯಂತ್ರಿಸಲಾಗಿದೆ ಎಂದು ಭಾರತೀಯ ರೈಲ್ವೆಯ ನೈರುತ್ಯ ರೈಲ್ವೆ ವಲಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಯಾವೆಲ್ಲ ರೈಲುಗಳು ರದ್ದು?
ಆಗಸ್ಟ್ 23ರಂದು, ರೈಲು ಸಂಖ್ಯೆ 06270 ಎಸ್ಎಂವಿಟಿ ಬೆಂಗಳೂರು–ಮೈಸೂರು ಡೈಲಿ ಪ್ಯಾಸೆಂಜರ್ ರೈಲು ರದ್ದುಗೊಳ್ಳಲಿದೆ. ಆಗಸ್ಟ್ 24ರಂದು, ಮೈಸೂರು–ಎಸ್ಎಂವಿಟಿ ಬೆಂಗಳೂರು ಡೈಲಿ ಪ್ಯಾಸೆಂಜರ್ (06269), ಶಿವಮೊಗ್ಗ ಟೌನ್–ಮೈಸೂರು ಡೈಲಿ ಎಕ್ಸ್ಪ್ರೆಸ್ (16226), ಮೈಸೂರು–ಶಿವಮೊಗ್ಗ ಟೌನ್ ಡೈಲಿ ಎಕ್ಸ್ಪ್ರೆಸ್ (16225), ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56267), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56268), ಮೈಸೂರು–ಅರಸೀಕೆರೆ ಡೈಲಿ ಪ್ಯಾಸೆಂಜರ್ (56266) ಮತ್ತು ಅರಸೀಕೆರೆ–ಮೈಸೂರು ಡೈಲಿ ಪ್ಯಾಸೆಂಜರ್ (56265) ರೈಲುಗಳ ಸಂಚಾರ ಒಂದು ದಿನದ ಮಟ್ಟಿಗೆ ರದ್ದಾಗಲಿದೆ.
ಯಾವೆಲ್ಲ ರೈಲುಗಳ ಸಂಚಾರ ಭಾಗಶಃ ರದ್ದು?
ಆಗಸ್ಟ್ 24ರಂದು ರೈಲು ಸಂಖ್ಯೆ 56271 ಶಿವಮೊಗ್ಗ ಟೌನ್–ಚಿಕ್ಕಮಗಳೂರು ಡೈಲಿ ಪ್ಯಾಸೆಂಜರ್ ರೈಲು ಶಿವಮೊಗ್ಗ ಟೌನ್ ಮತ್ತು ಬೀರೂರು ನಡುವೆ ಭಾಗಶಃ ರದ್ದುಗೊಳ್ಳಲಿದೆ. ಈ ರೈಲು ಬೀರೂರಿನಿಂದ ನಿಗದಿತ ಸಮಯದಲ್ಲಿ ಪ್ರಯಾಣ ಆರಂಭಿಸಲಿದೆ.
Missing person case ಅನನ್ಯಾ ಭಟ್ ನಿಜವಾಗ್ಲೂ ಸುಜಾತಾ ಭಟ್ ಮಗಳಾ? ಧರ್ಮಸ್ಥಳದ ನಾಪತ್ತೆ ಕೇಸ್ಗೆ ಬಿಗ್ ಟ್ವಿಸ್ಟ್