newsics.com
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಿ. ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಪಿಟಿಐಗೆ ವಿಡಿಯೋ ಸಂದರ್ಶನ ನೀಡಿರುವ ಅವರು, ಸೌಜನ್ಯ ಕೇಸ್‌ನಲ್ಲಿ ನಾನು ಸರ್ಕಾರಕ್ಕೆ ಮಾಹಿತಿ ನೀಡಿ, ತಕ್ಷಣವೇ ಅಪರಾಧಿಯನ್ನು ಪತ್ತೆಹಚ್ಚುವಂತೆ ಮಾಡಿದೆ. ಪೊಲೀಸರಿಗೆ ಮಾಹಿತಿ ನೀಡುವುದನ್ನು ಬಿಟ್ಟು ನಮಗೆ ಬೇರೆ ಯಾವುದೇ ವಿಚಾರ ನಮಗೆ ಸಂಬಂಧವಿಲ್ಲ. ಘಟನೆ ನಡೆದಾಗ ನಮ್ಮ ಕುಟುಂಬದ ಸದಸ್ಯರು ದೇಶದಲ್ಲೇ ಇರಲಿಲ್ಲ. ಅವರು ಶಿಕ್ಷಣಕ್ಕಾಗಿ ವಿದೇಶದಲ್ಲಿದ್ದರು. ಆದರೂ, ಅವರೇ ಈ ಕೃತ್ಯ ಎಸಗಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಹೊರಿಸಲಾಯಿತು. ನಮ್ಮನ್ನು ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಆರೋಪ ಮಾಡಿದ್ರೂ ಕ್ಷೇತ್ರದಲ್ಲಿ ಎಲ್ಲವೂ ಹಾಗೆಯೇ ಇದೆ. ಭಕ್ತರು ಎಲ್ಲಾ ಕಡೆಯಿಂದ ಇಲ್ಲಿ ಬರ್ತಾರೆ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಹಿಂದಿನಿಂದಲೂ ಸೂಕ್ಷ್ಮವಾಗಿ ಯೋಜನೆ ಮಾಡಿ, ಆರೋಪ ಮಾಡಿದ್ದಾರೆ. ಎಸ್ಐಟಿ ತನಿಖೆ ನಡೆಯುತ್ತಿರೋದು ಸ್ವಾಗತ. ಸತ್ಯಾಸತ್ಯತೆ ಹೊರಬರುತ್ತೆ. ಎಲ್ಲಾ ಸತ್ಯ ಹೊರಬರಲಿ, ಎಲ್ಲಾ ಹೊರಬರಲಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಜನಕ್ಕೆ ಬೇಸರ ಆಗಿದೆ. ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತ ಅವರು ಆಗ್ರಹಿಸಿದ್ದಾರೆ.
https://www.newsics.com/2025/08/19/rahul-gandhis-car-hits-police-constable-during-rally/