newsics.com
ಅಹಮದಾಬಾದ್: ಶಾಲೆಯಲ್ಲಿ ಜಗಳ ನಡೆಯುವ ವೇಳೆ ಸಹಪಾಠಿಯಿಂದ ಚೂರಿ ಇರಿತಕ್ಕೆ ಒಳಗಾದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಶಾಲೆಯಲ್ಲಿ ನಡೆದಿದೆ.
ಮಂಗಳವಾರ 8ನೇ ತರಗತಿಯ ವಿದ್ಯಾರ್ಥಿ ಜೊತೆ 10ನೇ ತರಗತಿಯ ವಿದ್ಯಾರ್ಥಿಗೆ ಜಗಳ ನಡೆದಿತ್ತು. ಈ ವೇಳೆ 8ನೇ ತರಗತಿ ವಿದ್ಯಾರ್ಥಿ ಹಿರಿಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದಿದ್ದ.ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಈ ವಿಚಾರ ತಿಳಿದು ಮಕ್ಕಳ ಪೋಷಕರು ಶಾಲೆಗೆ ನುಗ್ಗಿ ಭಾರೀ ಪ್ರತಿಭಟನೆ ನಡೆಸಿದ್ದಾರೆ.