newsics.com
ದುಬೈ : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಕ್ರಿಕೆಟ್ ಇತಿಹಾಸದಲ್ಲಿ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ದುರಂತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲೇ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದ್ದು, ಬೆಂಗಳೂರು ಪಂದ್ಯಗಳನ್ನು ಸ್ಥಳಾಂತರಗೊಳಿಸಿದೆ.
ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯವಹಿಸಿದೆ. ಭಾರತದ ಪಂದ್ಯಗಳ ಪೈಕಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪ್ರಮುಖ ತಾಣವಾಗಿತ್ತು. ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯಕ್ಕೂ ಚಿನ್ನಸ್ವಾಮಿ ಕ್ರೀಡಾಂಗಣ ಪಂದ್ಯದಲ್ಲಿ ಆಯೋಜಿಸಲಾಗಿತ್ತು.
ಆದರೆ ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಐಸಿಸಿ ವೇಳಾಪಟ್ಟಿ ಪರಿಷ್ಕರಿಸುವುದಾಗಿ ಹೇಳಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಬೆಂಗಳೂರು ಪಂದ್ಯಗಳನ್ನು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.
https://www.newsics.com/2025/08/22/bomb-threat-to-bengaluru-city-civil-court/