newsics.com
ಬೆಂಗಳೂರು: ಗೌರಿ-ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುವ ಸಾರ್ವಜನಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ)ಆಗಸ್ಟ್ 25 ರಿಂದ 27, 2025ರವರೆಗೆ ಬೆಂಗಳೂರಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಾಗೂ ನೆರೆಯ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳಕ್ಕೆ 1,500 ಹೆಚ್ಚುವರಿ ಬಸ್‌ಗಳನ್ನು ನಿಯೋಜಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ರಾಯಚೂರು, ಕಲಬುರಗಿ, ಕಾರವಾರ, ಬಳ್ಳಾರಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಗೆ ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ವಿಶೇಷ ಬಸ್‌ಗಳು ಸಂಚರಿಸಲಿವೆ. ಇದೇ ರೀತಿ, ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಕುಶಾಲನಗರ, ಮಡಿಕೇರಿ ಮತ್ತು ಇತರ ಕಡೆಗೆ ಬಸ್‌ಗಳು ಕಾರ್ಯನಿರ್ವಹಿಸಲಿವೆ.
ಕೆಎಸ್‌ಆರ್‌ಟಿಸಿ ವಿಶೇಷ ಮತ್ತು ನಿಗದಿತ ಬಸ್‌ಗಳಿಗೆ ಟಿಕೆಟ್‌ಗಳನ್ನು ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿನ ಕೌಂಟರ್‌ಗಳ ಮೂಲಕ ಮುಂಗಡವಾಗಿ ಕಾಯ್ದಿರಿಸಬಹುದು. ವಿಶೇಷ ಆಫರ್ ಆಗಿ, ಒಂದೇ ಟಿಕೆಟ್‌ನಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರಿಗೆ ಬುಕ್ ಮಾಡಿದರೆ ಶೇ.5 ರಷ್ಟು ರಿಯಾಯಿತಿ ಲಭ್ಯವಿದೆ. ಜೊತೆಗೆ, ಹೋಗುವ ಮತ್ತು ಬರುವ ಟಿಕೆಟ್‌ಗಳನ್ನು ಏಕಕಾಲದಲ್ಲಿ ಕಾಯ್ದಿರಿಸಿದರೆ, ಹಿಂದಿರುಗುವ ಪ್ರಯಾಣದ ಟಿಕೆಟ್‌ನಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
https://www.newsics.com/2025/08/22/bollywood-actor-…iles-for-divorce/