newsics.com
ದಾವಣಗೆರೆ: ಆಲೂರು ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗ್ರಾಮ ಪಂಚಾಯತ್ ಎದುರು ನ್ಯಾಯಕ್ಕಾಗಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಳೆ.
ದೇವರಾಜ ಅರಸು ಶಾಲೆಯ ವಿದ್ಯಾರ್ಥಿನಿ ಪಿ.ಬಿ.ಸುಷ್ಮಿತಾ ಆಲೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸುತ್ತಿದ್ದಾಳೆ.
ರಸ್ತೆ ಸರಿಪಡಿಸುವಂತೆ ಹಾಗೂ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಆಗ್ರಹಿಸಿ ಧರಣಿ ನಡೆಸುತ್ತಿದ್ದಾಳೆ.
ಶಾಲೆಗೆ ಹೋಗುವ ರಸ್ತೆ ಗುಂಡಿಮಯವಾಗಿದೆ. ಸಂಪೂರ್ಣವಾಗಿ ಹದಗೆಟ್ಟಿರುವ ರಸ್ತೆಯಲ್ಲಿ ಮಳೆ ಬಂದಾಗ ಶಾಲೆಗೆ ಹೋಗುವುದೇ ಸಾಧ್ಯವಿಲ್ಲದಂತಾಗಿದೆ. ಹಲವು ಬಾರಿ ವಿದ್ಯಾರ್ಥಿಗಳು, ಶಿಕ್ಷಕರು ರಸ್ತೆ ಗುಂಡಿಯಲ್ಲಿ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ರಸ್ತೆ ಸರಿಪಡಿಸುವಂತೆ ವಿದ್ಯಾರ್ಥಿನಿ ಸುಷ್ಮಿತಾ ಒತ್ತಾಯಿಸಿದ್ದಾಳೆ.
ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವಿಲ್ಲ. ಇದರಿಂದಾಗಿ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆಯೂ ಸರಿಯಿಲ್ಲ. ಚರಂಡಿ ನೀರು ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಗ್ರಾಮದಲ್ಲಿ ಅವಾಂತರ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿನಿ ಬೇಡಿಕೆ ಇಟ್ಟಿದ್ದಾಳೆ.
ಪ್ಲಾಸ್ಟಿಕ್ ಕುರ್ಚಿಗೆ ತನ್ನ ಬೇಡಿಕೆಗಳ ಪಟ್ಟಿಯ ಫಲಕ ಕಟ್ಟಿ ಗ್ರಾಮ ಪಂಚಾಯಿತಿ ಎದುರು ವಿದ್ಯಾರ್ಥಿನಿ ಒಬ್ಬಳೇ ಪ್ರತಿಭಟನೆಗೆ ಕುಳಿತಿದ್ದಾಳೆ.
MLA Arrested ಇಡಿಯಿಂದ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿ ಬಂಧನ, ಸಿಕ್ಕಿಂನಿಂದ ಬೆಂಗಳೂರಿಗೆ ಶಿಫ್ಟ್