Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಲಾಸ್‌ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ
ದೇಶಪ್ರಮುಖ

ಕ್ಲಾಸ್‌ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ

Share
2 Min Read
SHARE

newsics.com

ಕಿಯೋಂಜಾರ್: ಶಾಲೆ ಬಿಡುವ ಸಮಯದಲ್ಲಿ 2ನೇ ಕ್ಲಾಸ್ ಬಾಲಕಿಯೊಬ್ಬಳು ಶಾಲಾ ಕೊಠಡಿಯೊಳಗೆ ನಿದ್ದೆಗೆ ಜಾರಿ ಸಂಕಷ್ಟಕ್ಕೀಡಾಗಿದ್ದಾಳೆ.

ಶಾಲೆಗೆ ಬೀಗ ಹಾಕುವ ವೇಳೆ ಶಿಕ್ಷಕರು ವಿದ್ಯಾರ್ಥಿನಿ ಜ್ಯೋತ್ಸ್ನಾ ದೇಹುರಿ ಕೊಠಡಿಯೊಳಗೆ ನಿದ್ದೆಗೆ ಜಾರಿದ್ದನ್ನು ಗಮನಿಸಿಲ್ಲ. ತರಗತಿಯಲ್ಲಿ ಯಾವ ಮಕ್ಕಳೂ ಬಾಕಿಯಾಗಿಲ್ಲ ಎಂಬುದನ್ನು ಪರಿಶೀಲನೆ ನಡೆಸದೆಯೇ ಶಾಲಾ ಸಿಬ್ಬಂದಿ ಶಾಲೆಗೆ ಬೀಗ ಹಾಕಿ ಹೋಗಿದ್ದಾರೆ. ಆದರೆ ನಿದ್ದೆಗೆ ಜಾರಿದ ಬಾಲಕಿಗೆ ಸ್ವಲ್ಪ ಹೊತ್ತಿನಲ್ಲೇ ಎಚ್ಚರವಾಗಿದ್ದು, ಕತ್ತಲ ಕೋಣೆಯಲ್ಲಿ ತಾನೊಬ್ಬಳೇ ಬಾಕಿಯಾಗಿರುವುದು ತಿಳಿದು ಭಯಗೊಂಡಿದ್ದಾಳೆ.

ಜತೆಗೆ ಶಾಲೆಯ ಕಿಟಕಿಯ ಕಬ್ಬಿಣದ ಸರಳುಗಳ ಮೂಲಕ ಆಕೆ ಹೊರಗೆ ಬರುವ ಪ್ರಯತ್ನ ಮಾಡಿದ್ದಾಳೆ. ಆದರೆ ದೇಹವನ್ನು ಹೊರಗೆ ತಳ್ಳುವಲ್ಲಿ ಯಶಸ್ವಿಯಾದ ಈ 2ನೇ ಕ್ಲಾಸ್ ಮಗುವಿಗೆ ತನ್ನ ತಲೆಯನ್ನು ಈ ಕಿಟಕಿಯ ಕಬ್ಬಿಣದ ಸರಳುಗಳಿಂದ ಹೊರಗೆ ತರಲು ಸಾಧ್ಯವಾಗದೆ ಕಷ್ಟಪಟ್ಟಿದ್ದಾಳೆ.

ರಾತ್ರಿಯಿಡೀ ಬಾಲಕಿ ಕಾಡುಪ್ರಾಣಿಗಳ ಭಯದ ಜತೆ ಈ ಕತ್ತಲ ಕೋಣೆಯ ಕಿಟಕಿಯಲ್ಲಿ ತಲೆ ಸಿಲುಕಿಸಿಕೊಂಡೇ ಕಾಲ ಕಳೆದಿದ್ದಾಳೆ.

ಇತ್ತ ಈಕೆಯ ಪೋಷಕರು ದಿನಗೂಲಿ ನೌಕರರಾಗಿದ್ದು, ಮಗಳು ಶಾಲೆಯಿಂದ ಬಾರದೇ ಇರುವುದನ್ನು ನೋಡಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ. ಆದರೆ ಬಾಲಕಿ ಮಾತ್ರ ಅವರಿಗೆ ಸಿಗಲಿಲ್ಲ, ಅವರು ಶಾಲೆಯ ಆವರಣಕ್ಕೆ ಮಗಳನ್ನು ಹುಡುಕಿಕೊಂಡು ಬಂದಿಲ್ಲ, ಹೀಗಾಗಿ ಮರುದಿನ ಬೆಳಗ್ಗೆ ಶಾಲೆ ಬಾಗಿಲು ತೆರೆದ ನಂತರವಷ್ಟೇ ಶಾಲಾ ಬಾಲಕಿ ಕಿಟಕಿಯಲ್ಲಿ ಸಿಲುಕಿದ ತನ್ನ ತಲೆಯನ್ನು ಬಿಡಿಸಿಕೊಳ್ಳಲು ಯತ್ನಿಸುತ್ತಾ ಸುಸ್ತಾಗಿ ಕಿಟಕಿಯಲ್ಲೇ ಕುಳಿತಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಗ್ರಾಮಸ್ಥರು ಕಿಟಕಿಯ ಸರಳನ್ನು ಅಗಲಿಸಿ ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಿಂದ ಸುಮಾರು ಐದು ಕಿಲೋಮೀಟರ್ ದೂರದಲ್ಲಿರುವ ಅಂಜಾರ್‌ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ.

ಇತ್ತ ಚಿಂತೆಗೀಡಾದ ಜ್ಯೋತ್ಸ್ನಾಳ ಪೋಷಕರು ರಾತ್ರಿಯಿಡೀ ಅವಳನ್ನು ಹುಡುಕಿದರು, ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಶುಕ್ರವಾರ (ಆಗಸ್ಟ್ 22) ಬೆಳಗ್ಗೆ ಶಾಲೆ ಮತ್ತೆ ತೆರೆದಾಗ, ಕಿಟಕಿಯ ಕಂಬಿಯ ಮೂಲಕ ಪುಟ್ಟ ಹುಡುಗಿ ನೇತಾಡುತ್ತಿರುವುದನ್ನು ಕಂಡು ಅವರು ಗಾಬರಿಗೊಂಡಿದ್ದಾರೆ. ಕೂಡಲೇ ಜ್ಯೋತ್ಸ್ನಾಳ ರಕ್ಷಣೆಗೆ ಧಾವಿಸಿದ ಗ್ರಾಮಸ್ಥರು ಕಬ್ಬಿಣದ ಸರಳುಗಳನ್ನು ಬಗ್ಗಿಸಿ ಅವಳನ್ನು ಬಿಡುಗಡೆ ಮಾಡಿದರು. ನಂತರ ಅವಳನ್ನು ಕಿಯೋಂಜಾರ್ ಜಿಲ್ಲಾಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವಳನ್ನು ಪರೀಕ್ಷಿಸಿ ಪೋಷಕರಿಗೆ ಹಸ್ತಾಂತರಿಸಿದರು.

ಶಿಕ್ಷಕರು ಮತ್ತು ಸಿಬ್ಬಂದಿಯ ಕಡೆಯಿಂದ ಇದೊಂದು ಸಂಪೂರ್ಣ ನಿರ್ಲಕ್ಷ್ಯದ ಘಟನೆ ಅವರು ಯಾವುದೇ ಮಗುವನ್ನು ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕಿತ್ತು. ನನ್ನ ಪುಟ್ಟ ಮಗಳು ರಾತ್ರಿಯನ್ನು ಹೇಗೆ ಕಳೆದಳು ಎಂಬುದನ್ನು ಊಹಿಸಿಯೇ ಭಯವಾಗುತ್ತಿದೆ ಎಂದು ಜ್ಯೋತ್ಸ್ನಾ ಅವರ ತಾಯಿ ಜುನು ದೇಹುರಿ ಹೇಳಿದ್ದಾರೆ.

ಬಾಲಕಿ ತರಗತಿಯೊಳಗೆ ನಿದ್ರಿಸಿದ್ದಳು, ಕೊಠಡಿಯಲ್ಲಿ ಮಕ್ಕಳು ಇದ್ದಾರೋ ಇಲ್ಲವೋ ಎಂದು ಸರಿಯಾದ ತಪಾಸಣೆ ಮಾಡದೇ ಲಾಕ್ ಮಾಡಲಾಗಿತ್ತು. ಈ ಘಟನೆ ದುರದೃಷ್ಟಕರ ಎಂದು ಶಾಲೆಯ ಶಿಕ್ಷಕಿ ಸಂಜಿತಾ ದಾಶ್ ಹೇಳಿದ್ದಾರೆ. ಈ ಘಟನೆಯಿಂದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಶಾಲೆಯ ಮುಖ್ಯೋಪಾಧ್ಯಾಯರಾದ ಗೌರಹರಿ ಮೊಹಂತ ಅವರನ್ನು ನಿರ್ಲಕ್ಷ್ಯದ ಆರೋಪದಡಿ ಅಮಾನತುಗೊಳಿಸಲಾಗಿದೆ.

https://twitter.com/i/status/1958933719621734893

TAGGED:Student falls asleep in classteacher locks her in and goes home
Share This Article
Facebook Twitter Copy Link Print
Previous Article ಫ್ರಿಡ್ಜ್ ನಲ್ಲಿ ತುಂಡು ನಿಂಬೆಹಣ್ಣು ಇಟ್ಟರೆ ಏನಾಗುತ್ತೆ?
Next Article Tech info ಸಿಗ್ನಲ್ ಇಲ್ಲದಿದ್ದರೇನಂತೆ… ಈ‌ ಫೋನ್‌ನಲ್ಲಿ ಕರೆ‌ ಮಾಡಬಹುದಂತೆ… ಗೂಗಲ್ ಹೇಳ್ತಿರೋದೇನು?

Popular Posts

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?