Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣ: ಕೊನೆಗೂ ಪೊಲೀಸ್ ವಿಚಾರಣೆಗೆ ಹಾಜರಾದ ಸಮೀರ್ ಎಂಡಿ
ಕರ್ನಾಟಕಪ್ರಮುಖ

ಧರ್ಮಸ್ಥಳ ಪ್ರಕರಣ: ಕೊನೆಗೂ ಪೊಲೀಸ್ ವಿಚಾರಣೆಗೆ ಹಾಜರಾದ ಸಮೀರ್ ಎಂಡಿ

Share
2 Min Read
SHARE

newsics.com

ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ಧ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ತಿಳಿದುಬಂದಿದೆ.

ಸಮೀರ್ ಎಂಡಿ ವಿರುದ್ದ ಬೆಳ್ತಗಂಡಿ ಪೊಲೀಸ್ ಠಾಣೆಗೆ ದೂರು ದಾಖಲಾಗಿತ್ತು. ಆದರೆ ಬಂಧನಕ್ಕೂ ಮೊದಲು ನಿರೀಕ್ಷಣಾ ಜಾಮೀನು ಪಡೆದಿದ್ದ ಸಮೀರ್‌ಗೆ ಎರಡು ದಿನದಲ್ಲಿ ವಿಚಾರಣೆಗೆ ಹಾಜರಾಗಲು ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ಸಮೀರ್ ಎಂಡಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾನೆ.

ಮೂವರು ವಕೀಲರ ಜತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಬೆಳ್ತಗಂಡಿ ಪೊಲೀಸರು ಸಮೀರ್ ಎಂಡಿಗೆ ಮೂರು ಬಾರಿ ನೋಟಿಸ್ ನೀಡಿದ್ದರು. ಬಂಧನ ಭೀತಿಯಲ್ಲಿದ್ದ ಸಮೀರ್ ಮಂಗಳೂರು ಕೋರ್ಟ್ ಮೂಲಕ ನಿರೀಕ್ಷಣಾ ಜಾಮೀನು ಪಡೆದಿದ್ದರು.
ಹೀಗಾಗಿ ಪೊಲೀಸರು ಬಂಧನ ಕಾರ್ಯಾಚರಣೆ ನಿಲ್ಲಿಸಿದ್ದರು. ಭಾನುವಾರ ಕೋರ್ಟ್ ನೀಡಿದ ಗಡುಗು ಅಂತ್ಯಗೊಳ್ಳುತ್ತಿದ್ದಂತೆ ಸಮೀರ್ ಎಂಡಿ ಬೆಳ್ತಂಗಡಿ ಪೊಲೀಸರ ಮುಂದೆ ಹಾಜರಾಗಿದ್ದಾರೆ.
ತನಿಖಾಧಿಕಾರಿ ನಾಗೇಶ್ ಕೆ ವಿಚಾರಣೆ ನಡೆಸುತ್ತಿದ್ದು, ಸಮೀರ್ ಎಂಡಿ ಬೆಳ್ತಂಗಡಿ ಠಾಣೆಯಲ್ಲೇ ವಿಚಾರಣೆ ನಡೆದಿದೆ ಎನ್ನಲಾಗಿದೆ. ಕೆಲ ದಾಖಲೆ ಪತ್ರಗಳನ್ನು ಹಿಡಿದು ಸಮೀರ್ ಎಂಡಿ ಬೆಳ್ತಗಂಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದು, ಧರ್ಮಸ್ಥಳದಲ್ಲಿ ಭದ್ರತೆ ಸಮಸ್ಯೆ ಕಾಡಲಿದೆ ಎಂದು ಸಮೀರ್ ಎಂಡಿ ನಿರೀಕ್ಷಾ ಜಾಮೀನು ಅರ್ಜಿಯಲ್ಲಿ ಉಲ್ಲೇಖಿಸಿದ್ದ. ಹೀಗಾಗಿ ಧರ್ಮಸ್ಥಳ ಠಾಣೆ ಬದಲು ಬೆಳ್ತಂಗಡಿ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಮೂರು ಬಾರಿ ನೊಟೀಸ್ ಕೊಟ್ಟರೂ ಹಾಜರಾಗದೇ ತಪ್ಪಿಸಿಕೊಂಡಿದ್ದ ಸಮೀರ್, ಇದೀಗ ಬಂಧನ ತಪ್ಪಿಸಿಕೊಳ್ಳಲು ಸಮೀರ್ ವಿಚಾರಣೆಗೆ ಹಾಜರಾಗಿದ್ದಾನೆ. ಬೆಳಗ್ಗೆ 10:30ರ ವೇಳೆಗೆ ವಿಚಾರಣೆಗೆ ಬರುವುದಾಗಿ ಹೇಳಿದ್ದ ಸಮೀರ್‌ ವಕೀಲರೊಂದಿಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಹಾಜರಾಗಿದ್ದಾನೆ. ಕೂಲಿಂಗ್‌ ಗ್ಲಾಸ್‌ ಧರಿಸಿದ್ದ ಸಮೀರ್‌ ಮುಗುಳು ನಗೆ ಬೀರುತ್ತಲೇ ವಿಚಾರಣೆಗೆ ಹಾಜರಾಗಿದ್ದು, ಸಕಲ ತಯಾರಿ ಮಾಡಿಕೊಂಡಿದ್ದ ಎಸ್‌ಐಟಿ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಧರ್ಮಸ್ಥಳ ದೇಗುಲ ವಿರುದ್ಧ ಅಪಪ್ರಚಾರ ಆರೋಪದಲ್ಲಿ `ದೂತ’ ಯೂಟ್ಯೂಬ್ ವಾಹಿನಿಯ ಸಮೀರ್‌ಗೆ ಕೋರ್ಟ್ ಇತ್ತೀಚೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಧರ್ಮಸ್ಥಳದಲ್ಲಿ ಅಪಪ್ರಚಾರದ ಆರೋಪ ಎದುರಿಸುತ್ತಿರುವ ಸಮೀರ್, ತಮ್ಮ ವಿಡಿಯೋದಲ್ಲಿ ದಂಗೆ ಏಳುವಂತೆ ಜನರಿಗೆ ಪ್ರಚೋದಿಸಿದ್ದ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಠಾಣೆಯಲ್ಲಿ ದೊಂಬಿ, ಪ್ರಚೋದನೆ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಕೇಸ್‌ಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಕೋರ್ಟ್ ಜಾಮೀನು ಬಳಿಕ ಧರ್ಮಸ್ಥಳದಲ್ಲಿ ತನಗೆ ಜೀವ ಬೆದರಿಕೆ ಇರುವುದಾಗಿ ಹೇಳಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಗೆ ಹಾಜರಾಗಲು ಪೊಲೀಸರು ಸೂಚಿಸಿದ್ದರು.

ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್

TAGGED:Dharmasthala case: Sameer MD finally appears for police questioning
Share This Article
Facebook Twitter Copy Link Print
Previous Article ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ
Next Article ಸೆಪ್ಟೆಂಬರ್ 1ರಿಂದ ಹೊಸ ನಿಯಮಗಳು ಜಾರಿ, ಏನೇನು ಬದಲಾವಣೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?