Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ
ಕರ್ನಾಟಕಪ್ರಮುಖ

ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ

Share
1 Min Read
SHARE

newsics.com

ಶಿವಮೊಗ್ಗ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿದ ಆರೋಪ ಸಾಬೀತಾದ ಕಾರಣ ಮೃತರ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ವಿಧಿಸಿ ಭದ್ರಾವತಿಯ ನಾ‌ಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್ ಅಹಮದ್ ಅವರನ್ನು ಕೊಲೆ ಮಾಡಿ ಮೃತದೇಹವನ್ನು ನೈಲಾನ್ ದಾರದಲ್ಲಿ ಕಟ್ಟಿ ಭದ್ರಾವತಿಯ ಹೊಸಸೇತುವೆ ಸಮೀಪ ಭದ್ರಾ ನದಿಯಲ್ಲಿ ಎಸೆಯಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ನ್ಯೂಟೌನ್ ಠಾಣೆ ಪೊಲೀಸರು ಇಮ್ತಿಯಾಜ್ ಪತ್ನಿ, ಶಿಕ್ಷಕಿ ಲಕ್ಷ್ಮಿ (29), ಆಕೆಯ ಪ್ರಿಯಕರ, ಜನ್ನಾಪುರದ ಎನ್‌.ಟಿ.ರಸ್ತೆಯ ನಿವಾಸಿ ಕೃಷ್ಣಮೂರ್ತಿ ಅಲಿಯಾಸ್ ಕಿಟ್ಟಿ (30) ಹಾಗೂ ಈತನ ಸ್ನೇಹಿತ ಶಿವರಾಜ್ ಅಲಿಯಾಸ್ ಶಿವು (32) ಎಂಬುವರನ್ನು ಬಂಧಿಸಿದ್ದರು.

ಇಮ್ತಿಯಾಜ್ ಹಾಗೂ ಲಕ್ಷ್ಮಿ ಪ್ರೀತಿಸಿ ವಿವಾಹವಾಗಿದ್ದರು. ನಂತರ ಆಕೆ, ಬಾಲ್ಯ ಸ್ನೇಹಿತ, ಚಾಲಕನಾಗಿದ್ದ ಕೃಷ್ಣಮೂರ್ತಿ ಜತೆ ಸ್ನೇಹ ಬೆಳೆಸಿದ್ದಳು. ಅದು ಅನೈತಿಕ ಸಂಬಂಧಕ್ಕೆ ತಿರುಗಿತ್ತು. ಪತ್ನಿಯು ಪ್ರಿಯಕರನ ಜತೆ ಸಲುಗೆಯಿಂದ ಇರುವುದನ್ನು ಇಮ್ತಿಯಾಜ್ ವಿರೋಧಿಸಿದ್ದ. ಹೀಗಾಗಿ ಜನ್ನಾಪುರದ ಮನೆಯಲ್ಲಿ ಅವರ ತಲೆಗೆ ರಾಡ್ ಮತ್ತು ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ್ದರು.

ತನಿಖೆ ನಡೆಸಿದ್ದ ಭದ್ರಾವತಿ ನಗರ ವಿಭಾಗದ ಆಗಿನ ಇನ್‌ಸ್ಪೆಕ್ಟರ್‌ಗಳಾದ ಪ್ರಭು ಬಿ.ಸೂರಿನ್ ಹಾಗೂ ಟಿ.ಕೆ.ಚಂದ್ರಶೇಖರ್ ನ್ಯಾಯಾಲಯಕ್ಕೆ ದೋಷಾರೋಪ‍ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್‌ ಅವರು ಲಕ್ಷ್ಮಿ ಹಾಗೂ ಕೃಷ್ಣಮೂರ್ತಿಗೆ ಮರಣದಂಡನೆ ಹಾಗೂ ಮತ್ತೊಬ್ಬ ಆರೋಪಿ ಶಿವರಾಜ್‌ಗೆ ಏಳು ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

TAGGED:lover sentenced to deathMur*der of government school teacher: Wife
Share This Article
Facebook Twitter Copy Link Print
Previous Article Tech info ಸಿಗ್ನಲ್ ಇಲ್ಲದಿದ್ದರೇನಂತೆ… ಈ‌ ಫೋನ್‌ನಲ್ಲಿ ಕರೆ‌ ಮಾಡಬಹುದಂತೆ… ಗೂಗಲ್ ಹೇಳ್ತಿರೋದೇನು?
Next Article GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 25-08-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

You Might Also Like

ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

Social Networks

Facebook-f Instagram Twitter
Welcome Back!

Sign in to your account

Lost your password?