Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ

Share
2 Min Read
SHARE

newsics.com

ನಿಗದಿತ ಅವಧಿಯೊಳಗೆ ರಾಜ್ಯ ಸರ್ಕಾರಿ ಅಧಿಕಾರಿ ಹಾಗೂ ನೌಕರರು ಸಂಬಳ ಪ್ಯಾಕೇಜ್ ಎಂದು ತಮ್ಮ ಬ್ಯಾಂಕ್ ಖಾತೆಯನ್ನು ನೋಂದಾಯಿಸಿಕೊಳ್ಳದಿದ್ದರೆ ಹಾಗೂ ಪಿಎಂಇಬಿವೈ ಮತ್ತು ಪಿಎಂಜೆಜೆಬಿವೈ ವಿಮಾ ಯೋಜನೆ ಪಡೆಯದಿದ್ದರೆ ವೇತನ ತಡೆಹಿಡಿಯಲು ಸರ್ಕಾರ ನಿರ್ಧರಿಸಿದೆ.

ಎ ಗುಂಪಿನ ಅಧಿಕಾರಿಗಳಿಗೆ ಹೆಚ್ ಆರ್ ಎಂಎಸ್‌ನಲ್ಲಿ ನೋಂದಾಯಿಸಲು ಆ. 31 ಕೊನೆಯ ದಿನ.

ನಿಗದಿತ ದಿನಾಂಕದೊಳಗೆ ನೋಂದಾಯಿಸಿಕೊಳ್ಳದಿದ್ದರೆ ವೇತನವನ್ನು ಹೆಚ್‌ಆರ್‌ಎಂಎಸ್‌ನಲ್ಲಿ ತಡೆಹಿಡಿಯಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಿಗೆ ಪತ್ರ ಬರೆದಿರುವ ಆರ್ಥಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಸರ್ಕಾರದ ಇಲಾಖೆಗಳಲ್ಲಿ ನೇರವಾಗಿ/ಪರೋಕ್ಷವಾಗಿ ಇರುವ ವಿವಿಧ ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಜಾಲವನ್ನು ಜಾರಿಗೆ ತರಲು ಅಥವಾ ಹೆಚ್ಚಿಸಲು ಉದ್ದೇಶಿಸಿರುವ ಸರ್ಕಾರಿ ಆದೇಶ ಸಂಖ್ಯೆ ಎಫ್‌ಡಿ-ಸಿಎಎಂ/1/2025, ದಿನಾಂಕ: 21.02.2025 ರ ಬಗ್ಗೆ ತಮ್ಮ ಗಮನವನ್ನು ಸೆಳೆಯಲಾಗಿದೆ.

ಈ ಸರ್ಕಾರಿ ಆದೇಶದ ಉದ್ದೇಶವೆಂದರೆ ವಿವಿಧ ಬ್ಯಾಂಕುಗಳು ತಮ್ಮ ಸಂಬಳ ಪ್ಯಾಕೇಜುಗಳಲ್ಲಿ ಉಚಿತವಾಗಿ ಅಥವಾ ನಾಮಮಾತ್ರ ವೆಚ್ಚದಲ್ಲಿ ನೀಡುವ ಅಪಘಾತ/ಅವಧಿ ವಿಮಾ ರಕ್ಷಣೆ ಮತ್ತು ಇತರ ಪ್ರಯೋಜನಗಳನ್ನು ಅಧಿಕಾರಿ/ನೌಕರರು ಪಡೆದು, ತಮ್ಮ ಅವಲಂಬಿತ ಕುಟುಂಬಗಳನ್ನು ಸುರಕ್ಷಿತಗೊಳಿಸುವುದು. ಅಲ್ಲದೆ, ಸಂಬಂಧಪಟ್ಟ ಅಧಿಕಾರಿ/ನೌಕರರು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯೋಜನೆಗಳಡಿ ಹೆಚ್ಚಿನ ವಿಮಾ ರಕ್ಷಣೆಗಾಗಿ ನೋಂದಣಿ ಮಾಡಿಕೊಳ್ಳಲು ಪ್ರೇರೇಪಿಸುವುದು. ಅಲ್ಲದೆ ಹೆಚ್ಚುವರಿ/ನಾಮಮಾತ್ರ ಪ್ರೀಮಿಯಂ ಪಾವತಿಸುವ ಮೂಲಕ, ಹೆಚ್ಚಿನ ವಿಮಾ ರಕ್ಷಣೆಗಾಗಿ ಬ್ಯಾಂಕುಗಳು ನೀಡುತ್ತಿರುವ ವೈಯಕ್ತಿಕ ಅಪಘಾತ ವಿಮೆಯನ್ನು ಪಡೆಯಲು ಪ್ರೋತ್ಸಾಹಿಸುವುದು.

ಸರ್ಕಾರಿ ಆದೇಶದ ಹೊರಡಿಸಿದ ಮೂರು ತಿಂಗಳಲ್ಲಿ ಎಲ್ಲಾ ಅಧಿಕಾರಿ/ನೌಕರರು ಮತ್ತು ವಿವಿಧ ನಿಗಮಗಳು/ಮಂಡಳಿಗಳ ಉದ್ಯೋಗಿಗಳು ತಮ್ಮ ಕುಟುಂಬಗಳ ಹಿತದೃಷ್ಟಿಯಿಂದ ತಮ್ಮ ಆಯ್ಕೆಯ ಯಾವುದೇ ಬ್ಯಾಂಕ್ ನೀಡುವ ಸಂಬಳ ಪ್ಯಾಕೇಜ್‌ಗಳನ್ನು ಸ್ವಯಂಪ್ರೇರಿತವಾಗಿ ಆಯ್ಕೆ ಮಾಡಲು ಹೆಚ್ಚಿನ ಆಸಕ್ತಿಯಿಂದ ಮನವೊಲಿಸುವುದು ಮತ್ತು ಸಂಬಂಧಪಟ್ಟ ಬ್ಯಾಂಕಿಗೆ ಸಂಬಳ ಪ್ಯಾಕೇಜುಗಳಲ್ಲಿ ಸೇರಿಸಲು ಅರ್ಜಿಯನ್ನು ಸಲ್ಲಿಸಲು ತಮ್ಮನ್ನು ಮತ್ತು ಎಲ್ಲಾ ಅಧಿಕಾರಿ/ನೌಕರರನ್ನು ಪ್ರೇರೇಪಿಸಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಇಲಾಖಾ ಮುಖ್ಯಸ್ಥರನ್ನು ಕೋರಲಾಗಿತ್ತು.

ಸರ್ಕಾರಿ ಆದೇಶ ಹೊರಡಿಸಿ 42 ತಿಂಗಳಾದರೂ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಂಡ ಅಧಿಕಾರಿಗಳು/ನೌಕರರ ಸಂಖ್ಯೆ 3 ಲಕ್ಷಗಳಿಗೆ ಮಾತ್ರ ತಲುಪಿದೆಯೆಂದು ಹಾಗೂ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ (PMSBY) ಯಡಿ 32,611 ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (PMJJBY) ಯಡಿ 25,386 ನೋಂದಣಿಗಳು ಮಾತ್ರ ಹೆಚ್.ಆರ್.ಎಂ.ಎಸ್ ನಲ್ಲಿ ದಾಖಲಾಗಿದ್ದು, ಯೋಜನೆಗಳಡಿ ಹೆಚ್ಚಿನ ಪ್ರಗತಿಯಾಗಿಲ್ಲವೆಂದು
ತಿಳಿದುಬಂದಿದೆ.

ಸರ್ಕಾರಿ ಆದೇಶದಲ್ಲಿ ವಿವರಿಸಿದಂತೆ ಎಲ್ಲಾ ಅರ್ಹ ಅಧಿಕಾರಿ/ನೌಕರರು ಕಡ್ಡಾಯವಾಗಿ ಸಂಬಳ ಪ್ಯಾಕೇಜಿನಲ್ಲಿ ನೋಂದಾಯಿಸಿಕೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ಈ ಕೆಳಗೆ ಸೂಚಿಸಿದಂತೆ ಸಂಬಳ ಪ್ಯಾಕೇಜುಗಳಲ್ಲಿ ನೋಂದಾಯಿಸಿಕೊಳ್ಳದ ಅಧಿಕಾರಿಗಳ ಸಂಬಳದ ವಿತರಣೆಯನ್ನು ತಡೆಹಿಡಿಯಲು ಕ್ರಮ ಕೈಗೊಳ್ಳಲು ಸರ್ಕಾರವು ಯೋಚಿಸಿದೆ ಎಂದಿದೆ.

ಎ ಗುಂಪಿನ ಅಧಿಕಾರಿಗಳು – ದಿನಾಂಕ 31-08-2025ರ ಒಳಗೆ

ಬಿ ಗುಂಪಿನ ಅಧಿಕಾರಿಗಳು – ದಿನಾಂಕ 30-09-2025ರ ಒಳಗೆ

ಸಿ ಗುಂಪಿನ ಅಧಿಕಾರಿಗಳು – ದಿನಾಂಕ 30-11-2025ರ ಒಳಗೆ

ಡಿ ಗುಂಪಿನ ಅಧಿಕಾರಿಗಳು – ದಿನಾಂಕ 31-01-2026ರ ಒಳಗೆ ನೋಂದಾಯಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್

ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ

TAGGED:The government has decided to withhold the salaries of government employees if this instruction is not followed within the stipulated time.
Share This Article
Facebook Twitter Copy Link Print
Previous Article Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್
Next Article ವಾಲ್ಮೀಕಿ ನಿಗಮ ಹಗರಣ ಪ್ರಕರಣ: 5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ಇಡಿ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?