newsics.com
ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಆಗಸ್ಟ್ 28, 2025ರಂದು ಭಾರೀ ಮಳೆಯ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ರಾಜ್ಯದ ಜನತೆಗೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದೆ.
ನಾಳೆ ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಆ. 28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳೀಗೆ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.