newsics.com
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ವಿಚಾರಣಾಧೀನ ಕೈದಿ ನಟ ದರ್ಶನ್‌ಗೆ ಮನೆ ಊಟ ಕೊಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿ ವಿಚಾರಣೆ ಮಾಡಿದ ನ್ಯಾಯಾಲಯದ ವಕೀಲರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಜು.25ಕ್ಕೆ ಆದೇಶ ಕಾಯ್ದಿರಿಸಿದ್ದಾರೆ.
ದರ್ಶನ್ ಗ್ಯಾಂಗ್‌ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿರು ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಪರ ವಕೀಲ ರಾಘವೇಂದ್ರ ಅವರು 24ನೇ ಎಸಿಎಂಎಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಧೀಶ ವಿಶ್ವನಾಥ್ ಸಿ. ಗೌಡರ್ ಅವರ ಮುಂದೆ ನಟ ದರ್ಶನ್ ಪರ ವಕೀಲ ರಾಘವೇಂದ್ರ ವಾದ ಮಂಡನೆ ಮಾಡಿದ್ದಾರೆ.
ಈ ವೇಳೆ ಜೈಲಿನಲ್ಲಿರುವ ವಿಚಾರಾಣಾಧೀನ ಖೈದಿಗಳು ಮನೆಯಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶ ಇದೆ. ಒಂದು ವೇಳೆ ವ್ಯವಸ್ಥೆ ಮಾಡಿಕೊಳ್ಳಲು ಆಗದಿದ್ದಾಗ ಜೈಲಿನಲ್ಲಿ ಪಡೆಯಲು ಅವಕಾಶ ಇದೆ. ಹೊರಗಿನಿಂದ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶ ನೀಡುವ ಅಧಿಕಾರ ಜೈಲು ಐಜಿಪಿಗೆ ನೀಡಲಾಗಿದೆ. ತಮ್ಮ ಸೌಲಭ್ಯಗಳನ್ನು ತಾವು ಪಡೆದುಕೊಳ್ಳಲು ಆಗದೇ ಇದ್ದಾಗ ಮಾತ್ರ ಜೈಲು ಅಥಾರಿಟಿ ನೀಡಬಹುದು ಎಂದು ಕಾನೂನು ಮಾಡಲಾಗಿದೆ ಎಂದು ವಾದ ಮಂಡನೆ ಮಾಡಿದ್ದಾರೆ.