newsics.com
ಆರೋಗ್ಯವು ಸರಿಯಾಗಿರಬೇಕಾದರೆ, ನಿದ್ರೆಯು ಅತೀ ಅವಶ್ಯಕ ಎಂದು ಹೇಳಲಾಗುತ್ತದೆ. ಅದರಲ್ಲೂ ಪ್ರತಿಯೊಬ್ಬ ವ್ಯಕ್ತಿಯೂ 7-8 ಗಂಟೆಗಳ ಕಾಲ ನಿದ್ರೆ ಮಾಡಬೇಕು ಎಂದು ಹೇಳಲಾಗುತ್ತದೆ. ಆದರೆ ಕೆಲವು ಅತಿಯಾಗಿ ದುಡಿಮೆ, ಒತ್ತಡ, ಕೆಲವು ಆರೋಗ್ಯ ಸಮಸ್ಯೆಗಳಿಂದಾಗಿ ಸರಿಯಾಗಿ ನಿದ್ರೆ ಬರದೇ ಇರುವುದು. ಹೀಗಾಗಿ ಅವರಿಗೆ ರಾತ್ರಿ ವೇಳೆ ಏಳೆಂಟು ಗಂಟೆ ನಿದ್ರೆ ಮಾಡಲು ಸಾಧ್ಯವಾಗದೆ ಇರುವುದು. ಇದರಿಂದ ಆರೋಗ್ಯದ ಮೇಲೆ ತೀವ್ರ ರೀತಿಯ ಪರಿಣಾಮ ಬೀರುವುದು ಮಾತ್ರವಲ್ಲದೆ, ದೈನಂದಿನ ಚಟುವಟಿಕೆಗಳ ಮೇಲೂ ಇದರ ಪರಿಣಾಮವಾಗುವುದು.
ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ
ರಾತ್ರಿ ಸರಿಯಾಗಿ ನಿದ್ದೆ ಮಾಡದೇ ಇದ್ದರೆ ರೋಗನಿರೋಧಕ ಶಕ್ತಿಗೂ ತೊಂದರೆಯಾಗುತ್ತದೆ. ಕಡಿಮೆ ಗಂಟೆಗಳ ನಿದ್ರೆ ರೋಗನಿರೋಧಕ ಶಕ್ತಿಯನ್ನು ದುರ್ಬಲಗೊಳಿಸುತ್ತದೆ.
ಪರಿಣಾಮವಾಗಿ ರೋಗಗಳು ಮತ್ತು ಸಾಂಕ್ರಾಮಿಕ ರೋಗಗಳ ಅಪಾಯವನ್ನು ಎದುರಿಸಬೇಕಾಗುತ್ತದೆ. ಈ ಕಾರಣದಿಂದಾಗಿ ಆಗಾಗ್ಗೆ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.
ಮಲಬದ್ಧತೆಯ ಸಮಸ್ಯೆ
ನಿದ್ರೆಯ ಕೊರತೆಯು ಜೀರ್ಣಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ನಿದ್ರಾಹೀನತೆಯಿಂದ ಬಳಲುತ್ತಿರುವವರು ಹೆಚ್ಚಾಗಿ ಮಲಬದ್ಧತೆಯನ್ನು ಅನುಭವಿಸುತ್ತಾರೆ. ಇದಕ್ಕೆ ಸಮಯಕ್ಕೆ ಸರಿಯಾಗಿ ಔಷಧಿ ನೀಡದಿದ್ದರೆ, ಅದು ಕರುಳಿನ ಅಡಚಣೆಯಂತಹ ಗಂಭೀರ ಸ್ಥಿತಿಗೆ ಕಾರಣವಾಗಬಹುದು.
ಮಾನಸಿಕ ಸಮಸ್ಯೆಗಳು
ಸರಿಯಾಗಿ ನಿದ್ದೆ ಮಾಡದಿದ್ದರೆ ತಲೆನೋವು ಬರುತ್ತದೆ. ಇದು ಕಿರಿಕಿರಿಯನ್ನು ಸಹ ಉಂಟುಮಾಡುತ್ತದೆ. ಜೊತೆಗೆ ಒತ್ತಡವೂ ಹೆಚ್ಚುತ್ತದೆ. ಈ ಕಾರಣದಿಂದಾಗಿ, ಆತಂಕ ಮತ್ತು ಖಿನ್ನತೆಯಂತಹ ಆರೋಗ್ಯ ಸಮಸ್ಯೆಗಳ ಸಾಧ್ಯತೆಗಳಿವೆ.
ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದಲ್ಲ
ಇದಲ್ಲದೆ, ನಿದ್ರೆಯ ಕೊರತೆಯು ಕಣ್ಣುಗಳ ಮೇಲೆ ಕೂಡ ನೇರ ಪರಿಣಾಮ ಬೀರುತ್ತದೆ. ದೇಹದಲ್ಲಿ ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವು ಹೆಚ್ಚಾಗುತ್ತದೆ. ಚರ್ಮವು ಸೂಕ್ಷ್ಮವಾಗಿರುವ ಪ್ರದೇಶಗಳಲ್ಲಿ ಇದರ ಪರಿಣಾಮ ಹೆಚ್ಚಾಗಿರುತ್ತದೆ. ಪರಿಣಾಮವಾಗಿ, ಕಣ್ಣುಗಳ ಕೆಳಗೆ ಕಪ್ಪು ವೃತ್ತಗಳು ಅಥವಾ ಕಲೆಗಳು ಕಾಣಿಸಿಕೊಳ್ಳುತ್ತವೆ.
ತೂಕ ಹೆಚ್ಚಿಸಿಕೊಳ್ಳುವುದು
ಸರಿಯಾದ ನಿದ್ರೆಯ ಕೊರತೆಯು ಹಸಿವು ಹಾರ್ಮೋನುಗಳ ಅಸಮತೋಲನೆ ಉಂಟಾಗುತ್ತದೆ. ಇದು ಆಹಾರದ ಕಡೆಗೆ ಗಮನವನ್ನು ಹೆಚ್ಚಿಸುತ್ತದೆ. ಅದರ ಹೊರತಾಗಿ, ಇದು ವಿವಿಧ ಆಹಾರಗಳನ್ನು ತಿನ್ನುವ ಬಯಕೆಯನ್ನು ಹೆಚ್ಚಿಸುತ್ತದೆ. ನೀವು ಅತಿಯಾಗಿ ತಿನ್ನುವ ಮತ್ತು ತೂಕ ಹೆಚ್ಚಾಗುವ ಸಾಧ್ಯತೆಗಳಿವೆ.