newsics. com
ಬೆಂಗಳೂರು:ಸಂಚಾರ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಇನ್ನಷ್ಟು ಕಠಿಣ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.
ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ಎಸ್ 281 ಅಡಿಯಲ್ಲಿ ಮತ್ತು 184 ಐಎಂವಿ ಕಾಯ್ದೆಯಡಿ ಹಾಗೂ ಎಫ್ಐಆರ್ ದಾಖಲು ಮಾಡಲು ಕ್ರಮ ಜರುಗಿಸಬೇಕೆಂದು ಖಡಕ್ ಸೂಚನೆ ರವಾನಿಸಿದ್ದಾರೆ.
Drive against high beam headlights continues
Next month
Drive against, Wrong direction driving,driving on footpath
and defective number plates all over the state including Blr cityFor wrong side driving on Bengaluru-Mysore highway FIR to be registered & DL to be impounded pic.twitter.com/cyShMYBrLi
— alok kumar (@alokkumar6994) July 22, 2024