Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡೂವರೆ ವರ್ಷದಲ್ಲಿ ನಿತ್ಯ ಸರಾಸರಿ 16ರಂತೆ 1888 ಅತ್ಯಾ*ಚಾರ: ಒಬ್ಬರಿಗೂ ಶಿಕ್ಷೆಯಿಲ್ಲ!
ಕರ್ನಾಟಕಪ್ರಮುಖ

ಎರಡೂವರೆ ವರ್ಷದಲ್ಲಿ ನಿತ್ಯ ಸರಾಸರಿ 16ರಂತೆ 1888 ಅತ್ಯಾ*ಚಾರ: ಒಬ್ಬರಿಗೂ ಶಿಕ್ಷೆಯಿಲ್ಲ!

Share
2 Min Read
SHARE

newsics.com

ಬೆಂಗಳೂರು: ಕಳೆದ ಎರಡೂವರೆ ವರ್ಷಗಳಲ್ಲಿ ರಾಜ್ಯದಲ್ಲಿ ನಿತ್ಯ ಸರಾಸರಿ 16ರಂತೆ 1,888 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, 2,143 ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ, ಒಬ್ಬನೇ ಒಬ್ಬ ಆರೋಪಿಗೂ ಶಿಕ್ಷೆಯಾಗಿಲ್ಲ.

ರಾಜ್ಯದಲ್ಲಿ ನೂತನ ಸರ್ಕಾರ ಬಂದಾಗಿನಿಂದ 2025ರ ಜುಲೈ ಅಂತ್ಯದವರೆಗೆ ರಾಜ್ಯದಲ್ಲಿ 549 ಪ್ರಕರಣಗಳಲ್ಲಿ 407 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 2024ರಲ್ಲಿ 739 ಪ್ರಕರಣಗಳಿಂದ 969 ಹಾಗೂ 2023ರಲ್ಲಿ 600 ಪ್ರಕರಣಗಳಿಂದ 767 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಒಟ್ಟು ದಾಖಲಾಗಿರುವ 1,888 ಪ್ರಕರಣಗಳಲ್ಲಿ 2,143 ಪ್ರಕರಣಗಳು ವಿಚಾರಣೆ ಹಂತದಲ್ಲಿದೆ. 83 ಪ್ರಕರಣಗಳು ಖುಲಾಸೆಗೊಂಡಿದ್ದು, ಒಂದೂ ಪ್ರಕರಣದಲ್ಲೂ ಶಿಕ್ಷೆಯಾಗಿಲ್ಲ ಎಂದು ಗೃಹ ಇಲಾಖೆ ನೀಡಿದ ವರದಿಯಿಂದ ಬಹಿರಂಗವಾಗಿದೆ.

ರಾಜ್ಯದಲ್ಲಿ ಪ್ರತಿದಿನ ಸರಾಸರಿ ಮೂರು ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ವರ್ಷ 2 ಪ್ರಕರಣಗಳಿಗೆ ಸೀಮಿತವಾಗಿತ್ತು. ಲೈಂಗಿಕ ಕಿರುಕುಳ ಹಾಗೂ ಗಂಡನಿಂದ ಕಿರುಕುಳ ಪ್ರಕರಣ ಸಂಖ್ಯೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಎರಡೂವರೆ ವರ್ಷಗಳಲ್ಲಿ 16,273 ಪ್ರಕರಣಗಳಿಂದ 19,312 ಆರೋಪಿಗಳನ್ನು ಬಂಧಿಸಲಾಗಿದೆ. ದಿನಕ್ಕೆ ಸರಾಸರಿ 16 ಮಂದಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವಾಗುತ್ತಿದೆ. ಈ ಪೈಕಿ 189 ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಶಿಕ್ಷೆ ಕೊಡಿಸುವಲ್ಲಿ ಪೊಲೀಸರು ಸಶಕ್ತರಾಗಿದ್ದಾರೆ.

ಪತಿಯಿಂದ ಪತ್ನಿಗೆ ಕಿರುಕುಳ ಪ್ರಕರಣಗಳು ಎರಡೂವರೆ ವರ್ಷಗಳಲ್ಲಿ 7,516 ಕೇಸ್ಗಳು ದಾಖಲಾಗಿದ್ದು, 7,930 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರತಿನಿತ್ಯ 8 ಕೇಸ್ಗಳು ಗಂಡನಿಂದ ಕಿರುಕಳ ಪ್ರಕರಣಗಳು ವರದಿಯಾಗುತ್ತಿವೆ. ಒಟ್ಟು ಪ್ರಕರಣಗಳಲ್ಲಿ 16 ಮಂದಿ ಅಪರಾಧಿಗಳಿಗೆ ಮಾತ್ರ ಶಿಕ್ಷೆಯಾಗಿದೆ. ಇನ್ನುಳಿದ ಪ್ರಕರಣಗಳು ವಿಚಾರಣೆ ಹಂತದಲ್ಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಿಚಯಸ್ಥರಿಂದಲೇ ಅತ್ಯಾಚಾರ: ದಾಖಲಾಗುವ ಬಹುತೇಕ ಪ್ರಕರಣಗಳಲ್ಲಿ ಆರೋಪಿಗಳು ಸಂತ್ರಸ್ತೆಗೆ ಸಂಬಂಧಿಗಳು ಹಾಗೂ ಪರಿಚಯಸ್ಥರಾಗಿದ್ದಾರೆ. ಮದುವೆಯಾಗುವುದಾಗಿ ನಂಬಿಸಿ ಒಟ್ಟಿಗೆ ಸುತ್ತಾಡುವ ಯುವ ಜೋಡಿಗಳು ದೈಹಿಕ ಸಂಪರ್ಕದ ಬಳಿಕ ವಿವಾಹವಾಗದೆ. ನುಣುಚಿಕೊಳ್ಳುವ ಪ್ರಹಸನಗಳು ಹೆಚ್ಚಾಗುತ್ತಿವೆ. ಬಳಿಕ ಠಾಣೆಗೆ ಹೋಗಿ ಸಂತ್ರಸ್ತೆಯು ಪ್ರಿಯಕರನ ವಿರುದ್ಧ ಅತ್ಯಾಚಾರ ಮಾಡಿರುವುದಾಗಿ ದೂರು ನೀಡುವುದು ಸಾಮಾನ್ಯವಾಗಿದೆ.

ಸಿನಿಮಾ ಹಾಗೂ ಸಾಮಾಜಿಕ ಜಾಲತಾಣಗಳಿಂದ ಪ್ರೇರೆಪಿತಗೊಂಡು ಆನ್ಲೈನ್ ಮೂಲಕ ಸಂಪರ್ಕ ಸಾಧಿಸಿ, ಆರಂಭವಾಗುವ ಸ್ನೇಹ ಕ್ರಮೇಣ ಆತ್ಮೀಯತೆಗೆ ತಿರುಗಿ ಬೇಜವಾಬ್ದಾರಿ ಕೃತ್ಯಗಳಲ್ಲಿ ಯುವ ಸಮುದಾಯ ಭಾಗಿಯಾಗುತ್ತಿರುವುದು ನೋವಿನ ವಿಚಾರವಾಗಿದೆ. ವಿವಿಧ ಕಾರಣಗಳಿಗಾಗಿ ದೂರವಾಗಿ, ತನಗೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ದೂರು ನೀಡುತ್ತಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಯುವತಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಸಿ, ಹಣ ವಸೂಲಿ ಮಾಡುವ ಆರೋಪಿಗಳ ಸಂಖ್ಯೆ ಕೂಡ ಕಡಿಮೆಯಾಗಿಲ್ಲ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು

TAGGED:1888 rapesan average of 16 per day in two and a half years: Not a single one punished!
Share This Article
Facebook Twitter Copy Link Print
Previous Article ಹಠಾತ್ ಪ್ರವಾಹದಿಂದ ಮಣಿಮಹೇಶ ಯಾತ್ರೆ ವೇಳೆ ಹತ್ತು ಯಾತ್ರಿಕರು ಸಾವು
Next Article ಟೇಕಾಫ್ ಆದ ಕೂಡಲೇ ಇಂಜಿನ್ ನಲ್ಲಿ ಬೆಂಕಿ, ಇಂದೋರ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್

Popular Posts

ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?