newsics.com
ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆ ಬಗ್ಗೆ ಯಾವುದೇ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ವೇಳಾಪಟ್ಟಿ ಸುಳ್ಳು ಎಂಬುದಾಗಿ ಕರ್ನಾಟಕ ಚುನಾವಣಾ ಆಯೋಗ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟಗೊಂಡಿರುವ ಬಗ್ಗೆ ಸುಳ್ಳು ಮಾಹಿತಿಯು ಹರಿದಾಡುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯ ಚುನಾವಣಾ ಆಯೋಗ ಯಾವುದೇ ವೇಳಾಪಟ್ಟಿ ಪ್ರಕಟಿಸಿರುವುದಿಲ್ಲ.
ಆಯೋಗ ಸುದ್ದಿಗೋಷ್ಠಿ ಕರೆದು ಚುನಾವಣೆಯ ವೇಳಾಪಟ್ಟಿ ಪ್ರಕಟಿಸುತ್ತದೆ. ಪ್ರಸ್ತುತ ಹರಿದಾಡುತ್ತಿರುವ ಚುನಾವಣಾ ವೇಳಾಪಟ್ಟಿ ಸುಳ್ಳು ಮಾಹಿತಿಯಾಗಿದೆ. ಸಾರ್ವಜನಿಕರು ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ರಾಜ್ಯ ಚುನಾವಣಾ ಆಯೋಗದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.