newsics.com
ಕೋಲಾರ: ಅಮೆರಿಕಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿಕೋಲಾರ ಜಿಲ್ಲೆಯ ಗಾಂಧಿನಗರ ಬಡಾವಣೆಯ ಮೂಲದ ಮಾಡೆಲ್ ಹಾಗೂ ಬಾಡಿ ಬಿಲ್ಡರ್ ಸುರೇಶ್ ಕುಮಾರ್ (42) ಸಾವನ್ನಪ್ಪಿದ್ದಾರೆ.
ಇವರು ಗಾಂಧಿನಗರದ ಚಲಪತಿ ಹಾಗೂ ಮುನಿಯಮ್ಮ ದಂಪತಿಯ ಪುತ್ರ. ಸುರೇಶ್, ಮೂರು ದಿನಗಳ ಹಿಂದೆ ಫ್ಲೋರಿಡಾ – ಟೆಕ್ಸಾಸ್ನಲ್ಲಿ ನಡೆದಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ
.ಬಾಲ್ಯದಿಂದಲೇ ಕ್ರೀಡೆ ಹಾಗೂ ದೈಹಿಕ ಕ್ಷಮತೆ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದ ಅವರು ಬಳಿಕ ಬಾಡಿ ಬಿಲ್ಡಿಂಗ್ ಕ್ಷೇತ್ರಕ್ಕೆ ಕಾಲಿಟ್ಟರು.
ಕನ್ನಡದ ಹಲವಾರು ನಟ–ನಟಿಯರಿಗೆ ದೈಹಿಕ ತರಬೇತಿ ನೀಡಿ, ಫಿಟ್ನೆಸ್ ಜಗತ್ತಿನಲ್ಲಿ ಉತ್ತಮ ಹೆಸರು ಗಳಿಸಿದ್ದರು. ಹೀಗೆ ತಮ್ಮ ಪ್ರತಿಭೆ ಹಾಗೂ ಪರಿಶ್ರಮದಿಂದ ಕನ್ನಡ ಮನರಂಜನಾ ಕ್ಷೇತ್ರಕ್ಕೂ ಕೊಡುಗೆ ನೀಡಿದ್ದರು. ಅವರು ದೆಹಲಿ ಮೂಲದ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದರು. ಕುಟುಂಬದೊಂದಿಗೆ ಅಮೆರಿಕಾದಲ್ಲಿ ನೆಲೆಸಿದ್ದ ಅವರು ಮಾಡೆಲಿಂಗ್ ಮತ್ತು ಫಿಟ್ನೆಸ್ ತರಬೇತಿಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದರು.