Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಸ್ತಿಗಾಗಿ ತಂದೆಗೆ ಬ್ಲಾಕ್‌ಮೇಲ್‌ ಮಾಡಿದ ಮಗ ಇದೀಗ ಪೊಲೀಸರ ಅತಿಥಿ
ಕರ್ನಾಟಕ

ಆಸ್ತಿಗಾಗಿ ತಂದೆಗೆ ಬ್ಲಾಕ್‌ಮೇಲ್‌ ಮಾಡಿದ ಮಗ ಇದೀಗ ಪೊಲೀಸರ ಅತಿಥಿ

Share
1 Min Read
SHARE

newsics.com

ಮಂಡ್ಯ: ಆಸ್ತಿ ಆಸೆಯಿಂದ ಇಲ್ಲೊಬ್ಬ ಕಿರಾತಕ ಮಗ ಬ್ಲಾಕ್‌ಮೇಲ್ ಮಾಡಿ ತಂದೆಯಿಂದಲೇ ಹಣ, ಆಸ್ತಿ ಪೀಕಿಸಲು ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ನಡೆದಿದೆ.  ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಆತನ ಸ್ವಂತ ಮಗನಿಂದಲೇ ಬ್ಲಾಕ್‌ಮೇಲ್‌ಗೆ ಒಳಗಾದ ಘಟನೆಯು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ರಿಯಲ್ ಎಸ್ಟೇಟ್ ಉದ್ಯಮಿಯಾದ ಸತೀಶ್, ‘ರಾಣಿ ಐಶ್ವರ್ಯ ಡೆವಲರ್ಸ್’ ಹೆಸರಿನಲ್ಲಿ ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ ತಮ್ಮ ಬ್ಯುಸಿನೆಸ್ ಮೂಲಕ ಚಿರಪರಿಚಿತರು. ಇನ್ನು ಈತನಿಗೆ 25 ವರ್ಷದ ಮಗನೂ ಇದ್ದಾನೆ. ಈತನ ಹೆಸರು ಪ್ರಣವ್. ಆತ ತಂದೆಯ ಕೋಟ್ಯಾಂತರ ರೂಪಾಯಿಗಳ ಆಸ್ತಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆಲವು ವಿರೋಧಿಗಳ ಜೊತೆ ಸೇರಿಕೊಂಡು ಒಂದು ಖತರ್ನಾಕ್ ಪ್ಲಾನ್ ಮಾಡಿದ್ದಾನೆ.

ತಂದೆಯ ಭಾವಚಿತ್ರಕ್ಕೆ ಅಶ್ಲೀಲ ಚಿತ್ರಗಳನ್ನು ಮತ್ತು ವಾಯ್ಸ್ ರೆಕಾರ್ಡಿಂಗ್‌ಗಳನ್ನು ಎಡಿಟ್ ಮಾಡಿ, ಅವುಗಳನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಹರಿಬಿಟ್ಟಿದ್ದಾನೆ . ಈ ರೀತಿಯ ಕೃತ್ಯದ ಮೂಲಕ ತಂದೆಯನ್ನು ಮಾನಸಿಕವಾಗಿ ಕುಗ್ಗಿಸಿ, ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ. ಇದರ ಜೊತೆಗೆ, ಹಣಕ್ಕಾಗಿ ನಿರಂತರವಾಗಿ ಬೇಡಿಕೆ ಒಡ್ಡಿದ್ದಾನೆ ಎಂದು ಆರೋಪವಿದೆ. ಆದರೆ, ತಂದೆ ಸತೀಶ್ ಈ ಬೇಡಿಕೆಗೆ ಸ್ಪಂದಿಸದಿದ್ದಾಗ, ಪ್ರಣವ್ ಮತ್ತು ಆತನ ಸಹಚರರು ಈ ಬ್ಲಾಕ್‌ಮೇಲ್ ಮಾಡಲು ಮುಂದಾಗಿದ್ದಾರೆ.

 

ತನ್ನ ಮಗನ ಕೃತ್ಯಕ್ಕೆ ರೊಚ್ಚಿಗೆದ್ದ ತಂದೆ  ಮದ್ದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಮದ್ದೂರು ಪೊಲೀಸರು  ಆರೋಪಿಗಳಾದ ಪ್ರಣವ್, ಮಹೇಶ್, ಈಶ್ವರ್, ಮತ್ತು ಪ್ರೀತಮ್‌ರನ್ನು ಬಂಧಿಸಿದ್ದಾರೆ.

TAGGED:#Son #blackmailed #father #property #police #mandy #arrest
Share This Article
Facebook Twitter Copy Link Print
Previous Article ಭೂಕಂಪ ಪೀಡಿತ ಆಫ್ಘಾನಿಸ್ತಾನಕ್ಕೆ ಔಷಧ ಸೇರಿ 21 ಟನ್ ಸಾಮಗ್ರಿ ಕಳಿಸಿದ ಭಾರತ
Next Article ಐಷಾರಾಮಿ ಜೀವನ ಕಂಡಿದ್ದ ಡಿ ಬಾಸ್ ಗೆ ​ ಇದೀಗ ಜೈಲಿನಲ್ಲಿ ನಿತ್ಯ ನರಕ ದರ್ಶನ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?