newsics.com
ನವದೆಹಲಿ: ಪವನ್ ಕಲ್ಯಾಣ್ ಅವರ ಪ್ರಾಣಕ್ಕೆ ಅಪಾಯ ಇದೆ ಎಂಬುದು ತಿಳಿದುಬಂದಿದೆ. ಕೇಂದ್ರ ಗುಪ್ತಚರ ಇಲಾಖೆ ಅಧಿಕಾರಿಗಳು ಪವನ್ ಕಲ್ಯಾಣ್ ಅವರಿಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಜನಸೇನಾ ಪಕ್ಷದ ಮೂಲಕ ಪವನ್ ಕಲ್ಯಾಣ್ ಅವರಿಗೆ ಈ ವರ್ಷ ದೊಡ್ಡ ಗೆಲುವು ಸಿಕ್ಕಿತು. ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಜನಸೇನಾ ಪಕ್ಷ ಜಯಭೇರಿ ಬಾರಿಸಿತು. ಸಿನಿಮಾರಂಗದಲ್ಲೂ ಪವನ್ ಕಲ್ಯಾಣ್ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಇದೆಲ್ಲದರ ನಡುವೆ ಅವರ ಹತ್ಯೆಗೆ ಕೆಲವರು ಸ್ಕೆಚ್ ಹಾಕುತ್ತಿದ್ದಾರೆ ಎಂಬುದು ಆತಂಕಕಾರಿ ವಿಷಯ.
ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಆಗಿರುವ ಅವರು ಹತ್ತಾರು ಕಡೆಗಳಿಗೆ ಭೇಟಿ ನೀಡುತ್ತಿದ್ದಾರೆ. ಸಾರ್ವಜನಿಕವಾಗಿ ಸುತ್ತಾಡುವಾಗ ಅವರು ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಎದುರಾಗಿದೆ.
ಕಿಡಿಗೇಡಿಗಳು ಪವನ್ ಕಲ್ಯಾಣ್ ಅವರ ಹತ್ಯೆಗೆ ಸಂಚು ರೂಪಿಸುತ್ತಿರುವ ಕಾರಣದಿಂದ ಪೊಲೀಸರು ಭದ್ರತೆ ಹೆಚ್ಚಿಸಬೇಕು ಎಂದು ಗುಪ್ತಚರ ಇಲಾಖೆಯ ಅಧಿಕಾರಿಗಳು ಸಂದೇಶ ನೀಡಿದ್ದಾರೆ ಎನ್ನಲಾಗಿದೆ.
https://www.newsics.com/2024/07/22/kgf-fame-actress-roopa-rayappas-new-photoshoot-goes-viral-check-out-her-latest-pic