Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Lunar Eclipse 2025:ಈ ವರ್ಷದ ಕೊನೆಯ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?
ದೇಶಪ್ರಮುಖ

Lunar Eclipse 2025:ಈ ವರ್ಷದ ಕೊನೆಯ ಚಂದ್ರಗ್ರಹಣ; ಶುರು-ಅಂತ್ಯ ಯಾವಾಗ?

Share
1 Min Read
SHARE

newsics.com

ಹಿಂದೂ ಧರ್ಮದಲ್ಲಿ ಚಂದ್ರಗ್ರಹಣವನ್ನು ಬಹಳ ಮುಖ್ಯವೆಂದು ಪರಿಗಣಿಸಲಾಗುತ್ತದೆ. ಇದು ಖಗೋಳ ಘಟನೆಯಾಗಿದ್ದು, ಇದು ಧಾರ್ಮಿಕ ಮಹತ್ವವನ್ನು ಸಹ ಹೊಂದಿದೆ. ಭಾದ್ರಪದ ಪೂರ್ಣಿಮೆ ಸೆಪ್ಟೆಂಬರ್ 7ರಂದು ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಲಿದೆ. ಈ ಸಮಯದಲ್ಲಿ ಚಂದ್ರನು ಕೆಂಪು ಬಣ್ಣದಲ್ಲಿ ಗೋಚರಿಸುವುದರಿಂದ ಇದನ್ನು ರಕ್ತ ಚಂದ್ರ ಎಂದು ಕರೆಯಲಾಗುತ್ತದೆ. ಈ ಚಂದ್ರಗ್ರಹಣವು ಭಾರತದಲ್ಲಿ ಸಂಪೂರ್ಣವಾಗಿ ಗೋಚರಿಸುತ್ತದೆ.

ಚಂದ್ರನಿಗೆ ಭೂಮಿಯು ಅಡ್ಡಬಂದು ಸೂರ್ಯನ ಕಿರಣಗಳನ್ನು ತಡೆಗಟ್ಟುತ್ತದೆ. ಈ ಕಾರಣ, ಭೂಮಿಯ ವಾತಾವರಣದಲ್ಲಿ ಚದುರಿಸುವ ಕೆಂಪು ಬಣ್ಣವು, ಚಂದ್ರನ ಮೈಮೇಲಿಂದ ಪ್ರತಿಬಿಂಬಿಸುತ್ತದೆ. ಈ ಬೆಳಕಿನಿಂದಾಗಿ ಚಂದ್ರನು ಕೆಂಬಣ್ಣದಲ್ಲಿ ಗೋಚರಿಸುತ್ತಾನೆ.ಖಗೋಳಶಾಸ್ತ್ರಜ್ಞರು ಆಕಾಶಕಾಯಗಳ ಬೆಳಕನ್ನು ಪರಿಮಾಣ ಮಾಪನದಿಂದ ಗುರುತಿಸುತ್ತಾರೆ (ಈ ಸಂಖ್ಯೆ ಕಡಿಮೆ ಇದ್ದಷ್ಟು ಆಕಾಶಕಾಯ ಹೆಚ್ಚು ಪ್ರಕಾಶಮಾನವಾಗಿರುತ್ತದೆ).

 

ಸಾಮಾನ್ಯವಾಗಿ ಹುಣ್ಣಿಮೆಯ ಚಂದ್ರನ ಪರಿಮಾಣ ಸುಮಾರು ಮೈನಸ್ 13ರಷ್ಟಾಗಿರುವುದು. ಆದರೆ ಈ ಗ್ರಹಣದ ಸಮಯ ಮೈನಸ್ 1.35ರಷ್ಟು ಪರಿಮಾಣವಾಗಿರುತ್ತದೆ. ಅಂದರೆ, ಚಂದ್ರನು ಶೇ.99.9ರಷ್ಟು ಮಂದವಾಗಿ ಕಾಣಿಸುತ್ತಾನೆ.ಸೆ. 7ರಂದು, ರಾತ್ರಿ 8.50ಕ್ಕೆ ಗ್ರಹಣವು ಪ್ರಾರಂಭವಾಗುವಾಗ ಭೂಮಿಯ ಅರೆನೆರಳು ಚಂದ್ರನ ಮೇಲೆ ಬೀಳಲು ಪ್ರಾರಂಭವಾಗುತ್ತದೆ. ಭೂಮಿಯ ಅರೆನೆರಳು ಚಂದ್ರನ ಮೇಲೆ ಸ್ಪಷ್ಟವಾಗಿ ಗೋಚರಿಸುವುದಿಲ್ಲ.

 

ಸುಮಾರು 9.57ರಿಂದ ಭೂಮಿಯ ನೆರಳು ಚಂದ್ರನ ಮೇಲೆ ಹರಿದಾಡುತ್ತದೆ. ಗ್ರಹಣ ಮುಂದುವರಿಯುತ್ತಾ 11ಕ್ಕೆ ಚಂದ್ರನು ಸಂಪೂರ್ಣವಾಗಿ ಭೂಮಿಯ ನೆರಳಿನಲ್ಲಿ ಬಂದಿರುತ್ತಾನೆ. ಈ ಕ್ಷಣದಿಂದ ಮಧ್ಯರಾತ್ರಿ 12.22ರ ವರೆಗೆ (ಸುಮಾರು 1 ಗಂಟೆ 22 ನಿಮಿಷಗಳ ಕಾಲ) ಖಗ್ರಾಸ ಚಂದ್ರಗ್ರಹಣವನ್ನು ವೀಕ್ಷಿಸಬಹುದು. 11.41 ಗಂಟೆಗೆ ಗರಿಷ್ಠ ಗ್ರಹಣದ ಕಾಲದಲ್ಲಿ ಕೆಂಪು ಚಂದ್ರನನ್ನು ವೀಕ್ಷಿಸಬಹುದು

 

TAGGED:#Lunar #Eclipse #year #India #
Share This Article
Facebook Twitter Copy Link Print
Previous Article Bomb Threat ಮುಂಬೈನಲ್ಲಿ 34 ವಾಹನಗಳಲ್ಲಿ ಸ್ಫೋಟಕಗಳನ್ನು ಇಟ್ಟಿದ್ದೇವೆ ಎಂದು ಬಾಂಬ್ ಬೆದರಿಕೆ ಸಂದೇಶ
Next Article ಕರ್ನಾಟಕದಲ್ಲಿ 7.2 ಲಕ್ಷ ಮಕ್ಕಳಲ್ಲಿ `ಹೈ ಬಿಪಿ’ ಪತ್ತೆ : ವರದಿ ಬಹಿರಂಗ.!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?