newsics.com
ಬೀದರ್:ಸಾಲಬಾಧೆ ತಾಳಲಾರದೇ ಕಾಲುವೆಗೆ ಜಿಗಿದು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.
ಕಾರಂಜಾ ಡ್ಯಾಮ್ ಕಾಲುವೆಗೆ ಜಿಗಿದು ಒಂದೇ ಕುಟುಂಬದ 6 ಜನರು ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನಾಲ್ವರು ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ತನಿಖೆ ನಡೆಸಿದ್ದಾರೆ.