newsics.com
ಕಠ್ಮಂಡು: ನೇಪಾಳದಲ್ಲಿ ಸಾಮಾಜಿಕ ಜಾಲತಾಣದ ಮೇಲಿನ ನಿಷೇಧವನ್ನು ಖಂಡಿಸಿ ಆರಂಭವಾದ ಪ್ರತಿಭಟನೆ ಇದೀಗ ಕ್ರೌರ್ಯದ ರೂಪ ತಳೆದಿದೆ. ನೇಪಾಳ ಪ್ರಧಾನಿ ಕೆಪಿ ಶರ್ಮಾ ಒಲಿ ರಾಜೀನಾಮೆ ನಂತರವು ಯುವಕರ ಹೋರಾಟದ ಕಿಚ್ಚು ಕಮ್ಮಿಯಾಗಿಲ್ಲ. ನೇಪಾಳದ ಪಾರ್ಲಿಮೆಂಟ್, ಅಧ್ಯಕ್ಷರ ನಿವಾಸ, ಪ್ರಧಾನಿ ಬಂಗಲೆ, ವಿವಿಧ ರಾಜಕೀಯ ನಾಯಕರ ಮನೆಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿ ಬೆಂಕಿ ಹಚ್ಚುತ್ತಿದ್ದಾರೆ.
ನೇಪಾಳದ ಮಾಜಿ ಪ್ರಧಾನಿ ಜಲನಾಥ್ ಖಾನಲ್ ಅವರ ಮನೆಗೂ ಇಂದು ಬೆಂಕಿ ಹಚ್ಚಲಾಗಿದ್ದು, ಈ ವೇಳೆ ಮನೆಯ ಒಳಗಿದ್ದ ಜಲನಾಥ್ ಖಾನಲ್ ಅವರ ಪತ್ನಿ ರಾಜಲಕ್ಷ್ಮಿ ಜೀವಂತವಾಗಿ ಸುಟ್ಟುಹೋಗಿದ್ದಾರೆ. ಬೆಂಕಿಯಿಂದ ಸುಟ್ಟು ಹೋಗಿದ್ದ ರಾಜಲಕ್ಷ್ಮಿ ಅವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ಆದರೆ ಅಲ್ಲಿ ಅವರು ಸಾವನ್ನಪ್ಪಿದರು.