Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಏಷ್ಯಾಕಪ್ ಟೂರ್ನಿ: ಏಳು ವಿಕೆಟ್‌ಗಳಿಂದ ಪಾಕ್ ಮಣಿಸಿದ ಭಾರತ
ದೇಶಪ್ರಮುಖವಿದೇಶ

ಏಷ್ಯಾಕಪ್ ಟೂರ್ನಿ: ಏಳು ವಿಕೆಟ್‌ಗಳಿಂದ ಪಾಕ್ ಮಣಿಸಿದ ಭಾರತ

Share
3 Min Read
SHARE

newsics.com

ದುಬೈ: ಏಷ್ಯಾಕಪ್ ಟೂರ್ನಿಯ ಬಹುನಿರೀಕ್ಷಿತ ಪಂದ್ಯ ಎನಿಸಿಕೊಂಡಿದ್ದ ಭಾರತ ಹಾಗೂ ಪಾಕಿಸ್ತಾನ ನಡುವಿನ ಕಾದಾಟದಲ್ಲಿ ನಿರೀಕ್ಷೆಯಂತೆಯೇ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ 7 ವಿಕೆಟ್ ಅಂತರದ ಭರ್ಜರಿ ಜಯ ಸಾಧಿಸಿದೆ.

ಈ ಮೂಲಕ ಸೂಪರ್ 4 ಹಂತಕ್ಕೆ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವಲ್ಲಿ ಹಾಲಿ ಚಾಂಪಿಯನ್ ಭಾರತ ಯಶಸ್ವಿಯಾಗಿದೆ. ಆರಂಭಿಕ ಬ್ಯಾಟರ್ ಅಭೀಷೇಕ್ ಶರ್ಮಾ, ನಾಯಕ ಸೂರ್ಯಕುಮಾರ್ ಯಾದವ್ ಸ್ಪೋಟಕ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್ ಪ್ರದರ್ಶನದ ಎದುರು ಪಾಕಿಸ್ತಾನ ಮಂಡಿಯೂರಿದೆ.

ಭಾರತಕ್ಕೆ ಸುಲಭ ಜಯ
ಗೆಲ್ಲಲು ಕೇವಲ 128 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಸ್ಪೋಟಕ ಆರಂಭ ಒದಗಿಸಿಕೊಟ್ಟರು. ಶುಭಮನ್ ಗಿಲ್‌ ಕೇವಲ 10 ರನ್ ಗಳಿಸಿ ಸೈಮ್ ಆಯುಬ್‌ ಬೌಲಿಂಗ್‌ನಲ್ಲಿ ಸ್ಟಂಪೌಟ್‌ ಆಗಿ ಪೆವಿಲಿಯನ್ ಸೇರಿದರು. ಗಿಲ್ ವಿಕೆಟ್ ಪತನದ ಹೊರತಾಗಿಯೂ ಮತ್ತೊಂದು ತುದಿಯಲ್ಲಿ ಮೈಚಳಿ ಬಿಟ್ಟು ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 13 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 238.46ರ ಸ್ಟ್ರೈಕ್‌ರೇಟ್‌ನಲ್ಲಿ 31 ರನ್ ಸಿಡಿಸಿ ಸೈಮ್ ಆಯುಬ್‌ಗೆ ಎರಡನೇ ಬಲಿಯಾದರು. ಈ ವೇಳೆಗೆ ಭಾರತ ಕೇವಲ 3.4 ಓವರ್‌ಗಳಲ್ಲಿ 41 ರನ್ ಕಲೆಹಾಕಿತು.

ಇದಾದ ಬಳಿಕ ಮೂರನೇ ವಿಕೆಟ್‌ಗೆ ಜತೆಯಾದ ನಾಯಕ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಅಸರೆಯಾದರು. ಈ ಜೋಡಿ ಮೂರನೇ ವಿಕೆಟ್‌ಗೆ ಆಕರ್ಷಕ 56 ರನ್‌ಗಳ ಜತೆಯಾಟವಾಡಿದರು. ತಿಲಕ್ ವರ್ಮಾ 31 ಎಸೆತಗಳಲ್ಲಿ 31 ರನ್ ಸಿಡಿಸಿ ಸೈಮ್ ಆಯುಬ್‌ಗೆ ಮೂರನೇ ಬಲಿಯಾದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕನ ಆಟವಾಡಿದಈ ಗೆಲುವಿನೊಂದಿಗೆ ‘ಎ’ ಗುಂಪಿನಲ್ಲಿ ಭಾರತ ತಂಡವು 4 ಅಂಕಗಳೊಂದಿಗೆ ತನ್ನ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ.

ಬೌಲಿಂಗ್ ದಾಳಿಗೆ ಪಾಕ್ ಕಂಗಾಲು
ಇದಕ್ಕೂ ಮೊದಲು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಮೊದಲು ಬ್ಯಾಟ್ ಮಾಡುವ ತೀರ್ಮಾನ ತೆಗೆದುಕೊಂಡರು. ಆದರೆ ಪಾಕಿಸ್ತಾನ ಆರು ರನ್ ಗಳಿಸುವಷ್ಟರಲ್ಲೇ ಅಗ್ರಕ್ರಮಾಂಕದ ಇಬ್ಬರು ಬ್ಯಾಟರ್‌ಗಳು ಪೆವಿಲಿಯನ್ ಸೇರಿದರು. ಇದಾದ ಬಳಿಕ ಮೂರನೇ ವಿಕೆಟ್‌ಗೆ ಶಾಹಿಝಾದ್ ಫರ್ಹಾನ್ ಹಾಗೂ ಫಖರ್ ಜಮಾನ್ 39 ರನ್‌ಗಳ ಜತೆಯಾಟವಾಡುವ ಮೂಲಕ ಆಸರೆಯಾದರು.

ಆದರೆ ಫಖರ್ ಜಮಾನ್ ವಿಕೆಟ್ ಪತನದ ಬಳಿಕ ಪಾಕಿಸ್ತಾನ ತಂಡವು ನಾಟಕೀಯ ಕುಸಿತ ಕಂಡಿತು. ಭಾರತದ ವಿಶ್ವದರ್ಜೆಯ ಸ್ಪಿನ್ನರ್‌ಗಳ ಎದುರು ರನ್ ಗಳಿಸಲು ಪಾಕಿಸ್ತಾನ ಬ್ಯಾಟರ್‌ಗಳು ತಿಣುಕಾಡಿದರು. ನಾಯಕ ಸಲ್ಮಾನ್ ಅಘಾ 3, ಹಸನ್ ನವಾಜ್ 5, ಮೊಹಮ್ಮದ್ ನವಾಜ್ 0, ಫಾಹೀಮ್ ಅಶ್ರಫ್ 11 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಒಂದು ಹಂತದಲ್ಲಿ ಪಾಕಿಸ್ತಾನ 97 ರನ್ ಗಳಿಸುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡು ಅಲ್ಪಮೊತ್ತಕ್ಕೆ ಕುಸಿಯುವ ಭೀತಿಗೆ ಸಿಲುಕಿತ್ತು. ಆದರೆ ಒಂದು ಕಡೆ ವಿಕೆಟ್ ಬೀಳುತ್ತಿದ್ದರೂ ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಆರಂಭಿಕ ಬ್ಯಾಟರ್ ಶಾಹಿಝಾದ್ ಫರ್ಹಾನ್ 44 ಎಸೆತಗಳನ್ನು ಎದುರಿಸಿ 1 ಬೌಂಡರಿ ಹಾಗೂ ಮೂರು ಸಿಕ್ಸರ್ ಸಹಿತ 40 ರನ್ ಗಳಿಸಿ ಕುಲ್ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯಲ್ಲಿ ಶಾಹೀನ್ ಶಾ ಅಫ್ರಿದಿ ಕೇವಲ 16 ಎಸೆತಗಳಲ್ಲಿ 4 ಸಿಕ್ಸರ್ ಸಹಿತ ಅಜೇಯ 33 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 120ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಭಾರತ ಪರ ಕುಲ್ದೀಪ್ ಯಾದವ್ 18 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

TAGGED:Asia Cup tournament: India win by seven wickets
Share This Article
Facebook Twitter Copy Link Print
Previous Article ಶೌಚಾಲಯದಲ್ಲಿ ಮೊಬೈಲ್ ಬಳಸಿದ್ರೆ ಈ ಗಂಭೀರ ಖಾಯಿಲೆಗಳು ಬರಬಹುದು ಎಚ್ಚರ
Next Article

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?