newsics.com
ನವದೆಹಲಿ: ನವದೆಹಲಿ: 1xಬೆಟ್ ಹೆಸರಿನ ಆನ್ಲೈನ್ ಬೆಟ್ಟಿಂಗ್ ಆ್ಯಪ್ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಟಿ ಊರ್ವಶಿ ರೌಟೇಲಾ ಮತ್ತು ಕಾಂಗ್ರೆಸ್ನ ಮಾಜಿ ಸಂಸದೆ ನಟಿ ಮಿಮಿ ಚಕ್ರವರ್ತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಇಬ್ಬರಿಗೂ ಸೆ.19ರಂದು ವಿಚಾರಣೆಗೆ ಬರುವಂತೆ ಇ.ಡಿ. ಹೇಳಿದೆ.
ಈ ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಈಗಾಗಲೇ ಮಾಜಿ ಕ್ರಿಕೆಟಿಗರಾದ ಸುರೇಶ್ ರೈನಾ, ಶಿಖರ್ ಧವನ್ ಸೇರಿದಂತೆ ಹಲವು ಖ್ಯಾತನಾಮರ ವಿಚಾರಣೆ ನಡೆಸಿದೆ.
ಅಕ್ರಮ ಬೆಟ್ಟಿಂಗ್ ಅಪ್ಲಿಕೇಶನ್ ಗಳನ್ನು ಪ್ರಚಾರ ಮಾಡಿರುವುದರಿಂದ ಚಕ್ರವರ್ತಿ ಮತ್ತು ರೌಟೇಲಾ ಅವರನ್ನು ವಿಚಾರಣೆ ನಡೆಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಈ ಪ್ರಕರಣದಲ್ಲಿ ಭಾರತದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಮತ್ತು ಸುರೇಶ್ ರೈನಾ ಅವರ ಹೇಳಿಕೆಯನ್ನು ಸಿಬಿಐ ದಾಖಲಿಸಿತ್ತು.