Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > MUDA scandal ನಿವೇಶನ ಹಂಚಿಕೆ ಹಗರಣ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡಿ ವಶ
ಕರ್ನಾಟಕದೇಶಪ್ರಮುಖ

MUDA scandal ನಿವೇಶನ ಹಂಚಿಕೆ ಹಗರಣ: ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಇಡಿ ವಶ

Share
2 Min Read
SHARE

newsics.com

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಚುರುಕುಗೊಳಿಸಿದ್ದು, ವಿಚಾರಣೆ ಆಗಮಿಸಿದ್ದ ಮುಡಾ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಡಾ ಕೇಸ್‌ನಲ್ಲಿ ವಿಚಾರಣೆಗೆ ಕರೆದಿದ್ದರಿಂದ ಮಂಗಳವಾರ (ಸೆ.16) ಬೆಂಗಳೂರಿನ ಶಾಂತಿನಗರದ ಇಡಿ ಕಚೇರಿಗೆ ದಿನೇಶ್ ಕುಮಾರ್ ಆಗಮಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ವಿಚಾರಣೆ ಮಾಡಿ ಇದೀಗ ದಿನೇಶ್ ಅವರನ್ನು ತಮ್ಮ ವಶದಲ್ಲೇ ಇಟ್ಟುಕೊಂಡಿದ್ದಾರೆ.

ಮುಡಾ ಅಕ್ರಮ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಆಯುಕ್ತ ದಿನೇಶ್‌ ಕುಮಾರ್ ವಿರುದ್ಧ ತನಿಖೆ ನಡೆಸಲು ರಾಜ್ಯ ಸರ್ಕಾರ ಹಸಿರು ನಿಶಾನೆ ನೀಡಿದೆ.

ಮುಡಾದ ಮಾಜಿ ಅಧ್ಯಕ್ಷ ಎಚ್.ವಿ ರಾಜೀವ್ ಮತ್ತು ದಿನೇಶ್‌ಕುಮಾರ್ ವಿರುದ್ಧ ಲೋಕಾಯುಕ್ತ ತನಿಖೆಗೆ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು. ಆದರೆ, ದಿನೇಶ್‌ಕುಮಾರ್ ವಿರುದ್ಧ ಮಾತ್ರ ತನಿಖೆ ನಡೆಸಲು ಸರ್ಕಾರ ಅನುಮತಿ ಕೊಟ್ಟಿದೆ. ಇದರ ಬೆನ್ನಲ್ಲೇ ಇಡಿ ಅಧಿಕಾರಿಗಳು ದಿನೇಶ್ ಅವರನ್ನು ವಿಚಾರಣೆಗೆ ಕರೆದು ವಶಕ್ಕೆ ಪಡೆದುಕೊಂಡಿದೆ.

ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಈ ದಾಖಲೆಗಳ ಮೂಲಕ ಸೈಟ್ ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿದ್ದಾರೆ. ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿದೆ. 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು.

ಯಾವುದೇ ಸ್ಥಳ ತೋರಿಸದೇ ದಿನೇಶ್ ಕುಮಾರ್‌ ಅವರನ್ನು ವರ್ಗಾವಣೆ ಮಾಡಿದ್ದ ಸರ್ಕಾರ ನಂತರ ಹಾವೇರಿ ವಿವಿಯ ಕುಲಸಚಿವ ಹುದ್ದೆಯನ್ನು ನೀಡಿತ್ತು. ಕುಲಸಚಿವ ಹುದ್ದೆಯನ್ನು ನೀಡಿದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಸರ್ಕಾರ ಕೊನೆಗೆ ಆ ಆದೇಶವನ್ನೇ ರದ್ದು ಮಾಡಿತ್ತು

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಿನೇಶ್ ಅವರಿಗೆ ಸೇರಿದ ಆಸ್ತಿಯನ್ನು ಜಪ್ತಿ ಮಾಡಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ಅಸಮಾಧಾನ ಹೊರಹಾಕಿದೆ. ಆರು ತಿಂಗಳಿಂದ ಯಾವುದೇ ಪ್ರಗತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್ ಅನುಮತಿ ತಡವಾಗುತ್ತಿದೆ ಎಂದು ಹೇಳಲಾಗಿದೆ. ಈ ನಡುವೆ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಸಮಾಜದಲ್ಲಿ ನಾನು ಅವಮಾನ ಎದುರಿಸುತ್ತಿದ್ದೇನೆ, ಮಾನಸಿಕವಾಗಿಯೂ ಕುಗ್ಗಿದ್ದೇನೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆಗ್ರಹಿಸುವಂತೆ ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!

Gadag news ಹಳ್ಳದಲ್ಲಿ ಕೊಚ್ಚಿಹೋದ ಆರೋಗ್ಯ ಇಲಾಖೆ ಮಹಿಳಾ ಸಿಬ್ಬಂದಿ

ಹುಡುಗಿಯರೇ ನಿಮ್ಮ ಸಂಗಾತಿಗೆ ಕಿಸ್ ಮಾಡುವ ಮುನ್ನ ಎಚ್ಚರ; ಈ ಸಮಸ್ಯೆ ಕಾಣಿಸಬಹುದು

TAGGED:Site allocation scam: Former Muda Commissioner Dinesh Kumar arrested by ED
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮತ್ತೊಂದು ಬ್ಯಾಂಕ್ ದರೋಡೆ : ಮ್ಯಾನೇಜರ್, ಸಿಬ್ಬಂದಿ ಕೈ ಕಾಲು ಕಟ್ಟಿ ನಗದು, ಚಿನ್ನಾಭರಣ ದೋಚಿ ಪರಾರಿ!
Next Article ಪತ್ನಿಯನ್ನು ಕಟ್ಟಿಹಾಕಿ ಕ್ರೂರವಾಗಿ ಹಲ್ಲೆ ನಡೆಸಿದ ಪತಿ : ವೈರಲ್ ವಿಡಿಯೋ ನೋಡಿ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?