newsics.com
ಉಪೇಂದ್ರ ಹುಟ್ಟುಹಬ್ಬದ ಪ್ರಯುಕ್ತ ‘ಗೆರಿಲ್ಲಾ WAR’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ.ತ್ರಿಶೂಲಂ’ ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರಗೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿರುವ ಎರಡನೇ ಚಿತ್ರ ‘ಗೆರಿಲ್ಲಾ WAR’. ಇದು ಓಂ ಪ್ರಕಾಶ್ ನಿರ್ದೇಶನದ 50ನೇ ಚಿತ್ರವಾಗಿದೆ.
‘ಗೆರಿಲ್ಲಾ ವಾರ್’ ಹೆಸರಿನ ಈ ಹೊಸ ಸಿನಿಮಾದಲ್ಲಿ ಉಪೇಂದ್ರ ಸೈನಿಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಿಲಿಟರಿ ಆಪರೇಷನ್ ಹಿನ್ನೆಲೆಯ ಆಕ್ಷನ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಉಪೇಂದ್ರ ಆಧುನಿಕ ಶಸ್ತ್ರಾಸ್ತ್ರಗಳೊಂದಿಗೆ ಸೈನಿಕ ಸಮವಸ್ತ್ರದಲ್ಲಿ ಮಿಂಚುತ್ತಿರುವ ಪೋಸ್ಟರ್ ಈಗಾಗಲೇ ಕುತೂಹಲ ಹುಟ್ಟಿಸಿದೆ.
ಉಪೇಂದ್ರ ಮತ್ತು ಓಂಪ್ರಕಾಶ್ ರಾವ್ ಒಟ್ಟಿಗೆ ಕೆಲಸ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ. ಇನ್ನೂ ಬಿಡುಗಡೆಯಾಗಬೇಕಿರುವ ತ್ರಿಶೂಲಂಗೂ ಮುನ್ನವೇ ಗೆರಿಲ್ಲಾ ವಾರ್ ಘೋಷಣೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.