newsics.com
ಬೆಂಗಳೂರು : ಕರ್ನಾಟಕದಲ್ಲಿ ಜಾತಿ ಸಮೀಕ್ಷೆ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೀಗ ಸರ್ಕಾರದಿಂದ ಹೊಸ ಉಪಜಾತಿಗಳ ಸೃಷ್ಟಿ ಆರೋಪ ಬೆನ್ನಲ್ಲೇ ಹೈಕೋರ್ಟ್ಗೆ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದ್ದು, ಸರ್ಕಾರದ ಈ ಜಾತಿ ಜನಗಣತಿ ರದ್ದುಪಡಿಸುವಂತೆ ಕೋರಲಾಗಿದೆ.
ರಾಜ್ಯ ಸರ್ಕಾರ ತರಾತುರಿಯಲ್ಲಿ ಜಾತಿ ಗಣತಿ ನಡೆಸುತ್ತಿದೆ. ದಸರಾ ರಜೆಯಲ್ಲಿ ಅದರಲ್ಲೂ ಜನರು ಹಬ್ಬ, ಕೃಷಿ ಚಟುವಟಿಕೆಯಲ್ಲಿ ಭಾಗಿಯಾಗಿರುವಾಗ ಜಾತಿ ಗಣತಿ ನಡೆಸುತ್ತಿದೆ. ಇದು ಸರಿಯಲ್ಲ.ರಾಜ್ಯ ಸರ್ಕಾರ ಜಾತಿ ಗಣತಿಗೆ ಹೊಸ ಉಪಜಾತಿಗಳನ್ನು ಸೃಷ್ಟಿ ಮಾಡಿದೆ, ಜಾತಿ ಹಾಗೂ ಉಪಜಾತಿಗಳ ನಡುವೆ ಎಟ್ಟಿ ಕಟ್ಟುವ ಕೆಲಸ ಮಾಡಿದೆ ಎಂದು ಆರೋಪಿಸಲಾಗಿದೆ. ವಕೀಲ ಕೆ.ಎನ್ ಸುಬ್ಬಾರೆಡ್ಡಿ ಮತ್ತಿತರರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.