newsics.com
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಮಾವ ಮಾಡಿರುವ ಆರೋಪ ಮೇಲೆ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡ ಶೋಧ ಕಾರ್ಯ ಮಾಡುತ್ತಿದೆ.ಇದೀಗ ಎರಡನೇ ದಿನದವೂ ಸಹ ಎಸ್ಐಟಿ ಶೋಧ ಕಾರ್ಯ ನಡೆಸಿದೆ. ಈ ವೇಳೆ ಬುರುಡೆ ಮತ್ತು ಅಸ್ಥಿಪಂಜರದ ಬಳಿ ಒಂದು ಐಡಿ ಕಾರ್ಡ್ ಸಿಕ್ಕಿದ್ದು, ಆ ಐಡಿ ಕಾರ್ಡ್ ಯಾರದ್ದು ಏನು ಎನ್ನುವುದು ಸಹ ಬೆಳಕಿಗೆ ಬಂದಿದೆ.
ಇದು ಯು.ಬಿ.ಅಯ್ಯಪ್ಪ (70) ಎಂಬುವರ ಐಡಿ ಕಾರ್ಡ್ ಎನ್ನುವುದು ಗೊತ್ತಾಗಿದೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮದ ನಿವಾಸಿ ಅಯ್ಯಪ್ಪ 2017ರಲ್ಲಿ ನಾಪತ್ತೆಯಾಗಿದ್ದರು.
ಅಯ್ಯಪ್ಪ 2017ರಲ್ಲಿ ಮೈಸೂರಿನ ಆಸ್ಪತ್ರೆಗೆ ಹೋಗುವುದಾಗಿ ಹೇಳಿ ಹೋಗಿ ನಾಪತ್ತೆಯಾಗಿದ್ದರು. ಈ ಬಗ್ಗೆ ಕುಟುಂಬಸ್ಥರು, ಕುಟ್ಟ ಪೊಲೀಸ್ ಠಾಣೆಗೆ ದೂರು ಸಹ ನೀಡಿದ್ದರು. ಹೀಗಾಗಿ ಸಿಕ್ಕ ಅಸ್ಥಿಪಂಜರ ಸಹ ಅಯ್ಯಪ್ಪನವರದ್ದೇ ಇರಬಹುದು ಎಂಬ ಶಂಕೆಯೂ ವ್ಯಕ್ತವಾಗಿದೆ.
ಬಂಗ್ಲೆಗುಡ್ಡದಲ್ಲಿ ಪತ್ತೆಯಾದ ಅಸ್ಥಿಪಂಜರಗಳು ಮೇಲ್ನೋಟಕ್ಕೆ ಆತ್ಮಹತ್ಯೆಯ ಸ್ಥಿತಿಯಲ್ಲಿತ್ತು ಎಂದು ಮೂಲಗಳು ತಿಳಿಸಿವೆ. ತಲೆ ಬುರುಡೆ ಹಾಗೂ ಅವಶೇಷಗಳು ಹಗ್ಗ, ಬಟ್ಟೆಯಿಂದ ಮರಕ್ಕೆ ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು ಎನ್ನಲಾಗಿದೆ.