newsics.com
ಗದಗ: ಗೋವಾ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಹರ್ಲಾಪುರ ಗ್ರಾಮದಲ್ಲಿ ನಡೆದಿದೆ.
ಹಲವರು ಗಾಯಗೊಂಡಿದ್ದಾರೆ. ಕಾರು ಚಾಲಕ ಈರಣ್ಣ ಉಪ್ಪಾರ, ರವಿ ನೆಲ್ಲೂರು, ಅರ್ಜುನ್ ಮೃತ ದುರ್ದೈವಿಗಳು.
ಎನ್ ಹೆಚ್ 63ರಲ್ಲಿ ಡಿವೈಡರ್ ಗೆ ಡಿಕ್ಕಿಹೊಡೆದು ಕಾರು ಬಳಿಕ ಬಸ್ ಗೆ ಗುದ್ದಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದಾರೆ.