newsics.com
ಬೆಂಗಳೂರು: ದೇಶಾದ್ಯಂತ ನೀಟ್-ಯುಜಿ ಪರೀಕ್ಷೆ ಮೇ 5ರಂದು ನಡೆದಿತ್ತು. ಈ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಂಕ ಹೆಚ್ಚಳ ಸೇರಿದಂತೆ ಹಲವಾರು ಅಕ್ರಮಗಳು ನಡೆದಿವೆ ಎಂಬ ಆರೋಪಗಳು ವ್ಯಾಪಕವಾಗು ಕೇಳಿ ಬಂದಿದೆ.
ನೀಟ್ ಪರೀಕ್ಷೆ ಬದಲು ಹಳೆಯ ಪ್ರವೇಶ ಪರೀಕ್ಷೆ ವ್ಯವಸ್ಥೆಗೆ ಮರಳಲು ರಾಜ್ಯ ಸರಕಾರ ಚಿಂತನೆ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಉಭಯ ಸದನಗಳಲ್ಲಿ ತನ್ನ ನಿರ್ಣಯವನ್ನು ಅಂಗೀಕರಿಸಲು ಸಿದ್ಧತೆ ನಡೆಸಿದ್ದಾರೆ. ಮಸೂದೆ ಸದನದಲ್ಲಿ ಅಂಗೀಕಾರವಾದರೆ ಕರ್ನಾಟಕ ಕೂಡ ತನ್ನದೇ ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲಿದೆ.
ಇದೆಲ್ಲದರ ನಡುವೆ ನೀಟ್ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಾಧೀಶರಾದ ಜೆ.ಬಿ. ಪರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರ ಪೀಠ ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ. ಇದರಿಂದ 155 ಅಭ್ಯರ್ಥಿಗಳು ಪ್ರಯೋಜನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.