Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ದಿನೇ ದಿನೇ ಬೆಂಗಳೂರಿನ ರಸ್ತೆಗಳಲ್ಲಿನ ಗುಂಡಿಗಳ ಸುದ್ದಿ ಹೆಡ್ಲೈನ್ಸ್ ಆಗ್ತಿದ್ದು, ರಾಜ್ಯ ಸರ್ಕಾರ ಬೆಂಗಳೂರಿಗರ ಕೆಂಗಣ್ಣಿಗೆ ಗುರಿಯಾಗ್ತಿದೆ. ಇದೀಗ ಅಕ್ಟೋಬರ್ 31ರ ಒಳಗೆ ಬೆಂಗಳೂರಿನ ಎಲ್ಲಾ ಗುಂಡಿ ಮುಚ್ಚಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಗಡುವು ನೀಡಿದ್ದಾರೆ.
ಜೊತೆಗೆ ರಸ್ತೆಗುಂಡಿ ಮುಚ್ಚಲು ಹೆಚ್ಚುವರಿ 750 ಕೋಟಿ ರೂ. ಅನುದಾನ ಕೊಡುವ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ರಸ್ತೆ ಗುಂಡಿ ವಿಚಾರ ದೇಶ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗ್ತಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಜೊತೆ ಸಭೆ ನಡೆಸಿದ್ರು. ಸಭೆಯಲ್ಲಿ ರಸ್ತೆ ಗುಂಡಿಗಳ ವಿಚಾರವಾಗಿ ಅಧಿಕಾರಿಗಳ ಬೆವರಿಳಿಸಿದ ಸಿಎಂ, ಅಕ್ಟೋಬರ್ ಅಂತ್ಯ ವೇಳೆಗೆ ಎಲ್ಲಾ ಗುಂಡಿಗಳನ್ನು ಮುಚ್ಚಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಖಡಕ್ ಆದೇಶ ನೀಡಿದ್ದಾರೆ. ಗುಂಡಿ ಮುಚ್ಚಲು ಒಂದು ತಿಂಗಳ ಗಡುವುಕೊಟ್ಟ ಸಿಎಂ, ಬಳಿಕ ಇಂಜಿನಿಯರ್ಗಳನ್ನು ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡಿದ್ದಾರೆ.