Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಕೆಇಆರ್ಸಿ ಮಾದರಿಯಲ್ಲಿ ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿದ ಸರ್ಕಾರ
ಕರ್ನಾಟಕ

ಸರ್ಕಾರಿ ಬಸ್ ಟಿಕೆಟ್ ದರ ಏರಿಕೆಗೆ ಕೆಇಆರ್ಸಿ ಮಾದರಿಯಲ್ಲಿ ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿದ ಸರ್ಕಾರ

Share
1 Min Read
SHARE

Newsics_Kannada 

Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಬೆಂಗಳೂರು: ಪ್ರತಿ ವರ್ಷ ವಿದ್ಯುತ್ ದರ ಏರಿಕೆಗೆ ಶಿಫಾರಸು ಮಾಡವ ಕೆಎಆರ್‌ಸಿ ಮಾದರಿಯಲ್ಲಿ ಪ್ರತಿವರ್ಷ ಕೆಎಸ್ಆರ್ಟಿಸಿ ಸೇರಿ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರ ಪರಿಷ್ಕರಣೆಗೆ ಅನುಕೂಲವಾಗುವಂತೆ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ರಚಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

 

ಸಾರಿಗೆ ನಿಗಮಗಳಿಗೆ ವೈಜ್ಞಾನಿಕವಾಗಿ ಪ್ರಯಾಣದರ ಹೆಚ್ಚಳ ಮಾಡಲು ಈ ಹಿಂದೆ ಯಾವುದೇ ಸಮಿತಿ ರಚಿಸಿರಲಿಲ್ಲ. ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಇತ್ತೀಚೆಗೆ ಪ್ರಯಾಣ ದರ ಏರಿಕೆ ಮಾಡುವ ಬಗ್ಗೆ ಯಾವ ಸರ್ಕಾರ ಕೂಡ ಪ್ರಯತ್ನಕ್ಕೆ ಕೈಹಾಕಿರಲಿಲ್ಲ. ಡೀಸೆಲ್ ದರ ಇನ್ನಿತರೆ ವೆಚ್ಚ ಹೆಚ್ಚಳವಾಗುತ್ತಿದ್ದು, ದರ ಪರಿಷ್ಕರಣೆ ಇಲ್ಲದೆ ಸಾರಿಗೆ ಸಂಸ್ಥೆಗಳು ಆರ್ಥಿಕ ನಷ್ಟದಲ್ಲಿವೆ. ನಷ್ಟ ತಪ್ಪಿಸಿ ದರ ಹೆಚ್ಚಳ ಸರಿದೂಗಿಸಲು ದರ ಪರಿಷ್ಕರಣೆ ಅವಶ್ಯಕವೆಂದು ಕಂಡುಬಂದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

 

2014ರಲ್ಲಿ ಬಿಎಂಟಿಸಿ ದರ ಪರಿಷ್ಕರಿಸಿದ್ದು, ಇತರೆ ಸಾರಿಗೆ ನಿಗಮಗಳು 2020ರಲ್ಲಿ ಪ್ರಯಾಣದರ ಹೆಚ್ಚಳ ಮಾಡಿದ್ದವು. 2014ರಲ್ಲಿ 7 ಕೋಟಿ ರೂಪಾಯಿ ಇದ್ದ ದೈನಂದಿನ ಡೀಸೆಲ್ ವೆಚ್ಚ 2025 ರಲ್ಲಿ 13 ಕೋಟಿ ರೂ.ಗೆ ಹೆಚ್ಚಳವಾಗಿದೆ. ಸಿಬ್ಬಂದಿ ವೆಚ್ಚ 6 ಕೋಟಿ ರೂ.ನಿಂದ 12 ಕೋಟಿಯಾಗಿದ್ದು, ಈ ವೆಚ್ಚಗಳಲ್ಲಿ ಸುಮಾರು ಶೇಕಡ 100ರಷ್ಟು ಏರಿಕೆಯಾಗಿದೆ.

 

8- 10 ವರ್ಷಗಳಿಗೊಮ್ಮೆ ಏಕಾಏಕಿ ದರ ಪರಿಷ್ಕರಣೆಯಿಂದ ಪ್ರಯಾಣಿಕರಿಗೆ ಹೊರೆಯಾಗುತ್ತದೆ. ಕಾಲಕಾಲಕ್ಕೆ ಅಲ್ಪ ಪ್ರಯಾಣದರ ಏರಿಕೆ ವೈಜ್ಞಾನಿಕವಾಗಿ ಅನುಕೂಲವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಸಮಿತಿಯು ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಅಧ್ಯಯನ ನಡೆಸಿ ಕಾಲಕಾಲಕ್ಕೆ ಟಿಕೆಟ್ ದರ ಪರಿಷ್ಕರಣೆಗೆ ಶಿಫಾರಸು ಮಾಡಲಿದೆ.

Share This Article
Facebook Twitter Copy Link Print
Previous Article Heavy Rain ರಾಜ್ಯದಲ್ಲಿ ಭಾರೀ ಮಳೆ – 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
Next Article ಮಳೆಗೆ ಮತ್ತೊಂದು ಬಲಿ : ಮನೆಗೋಡೆ ಕುಸಿದು ಬಾಲಕಿ ಸಾವು, ನಾಲ್ವರಿಗೆ ಗಾಯ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ಕರ್ನಾಟಕಪ್ರಮುಖ

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?