Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಆದಾಯ ಮೀರಿ ಅಸ್ತಿಗಳಿಕೆ ಹಾಗೂ ತೆರಿಗೆ ವಂಚನೆ ಆರೋಪದ ಹಿನ್ನೆಲೆ ಪ್ರತಿಷ್ಠಿತ ಪಿಇಎಸ್ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.
ಬೆಳ್ಳಂ ಬೆಳಗ್ಗೆಯೇ ಬೆಂಗಳೂರಿನ PES ಕಾಲೇಜುಗಳು ಸೇರಿದಂತೆ ಹಲವು ಕಡೆಯ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಶಿಕ್ಷಣ ಸಂಸ್ಥೆಗೆ ಸಂಬಂಧಿಸಿದಂತೆ ಕಾಲೇಜಿನ ಮಾಲೀಕರು, ಆಡಳಿತ ಮಂಡಳಿಯವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗ್ತಿದೆ. ಹೊಸಕೆರೆಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಹನುಮಂತನಗರ ಸೇರಿದಂತೆ ಕೆಲ ಕಡೆಗಳ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಬೆಳ್ಳಂ ಬೆಳಗ್ಗೆ ದಾಳಿ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು, ಇಂಚಿಂಚು ಬಿಡದೆ ಕಡತಗಳ ಪರಿಶೀಲನೆ ನಡೆಸಿದ್ದಾರೆ.