Subscribe NewsicsKannada/YouTube
newsics.com
ಬೆಂಗಳೂರು: ಪದ್ಮಭೂಷಣ ಪುರಸ್ಕೃತ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪ (94) ನಿಧನರಾಗಿದ್ದು, ನಾಡಿದ್ದು ಶುಕ್ರವಾರ ಮೈಸೂರಿನಲ್ಲಿ ಎಸ್ .ಎಲ್ ಭೈರಪ್ಪ ಅಂತ್ಯಸಂಸ್ಕಾರ ನಡೆಸಲು ನಿರ್ಧರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ನಾಳೆ ಬೆಳಗ್ಗೆ ಎಂಟರಿಂದ ಮಧ್ಯಾಹ್ನದವರೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಎಸ್.ಎಲ್ ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ನಂತರ ಪಾರ್ಥಿವ ಶರೀರವನ್ನು ಮೈಸೂರಿಗೆ ಕೊಂಡೊಯ್ಯಲಾಗುತ್ತದೆ. ನಾಡಿದ್ದು (ಶುಕ್ರವಾರ) ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಮಾಹಿತಿ ನೀಡಿದ್ದಾರೆ.
ಗುರುವಾರ ಸಂಜೆ ಮೈಸೂರಿನ ಕಲಾಮಂದಿರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಬಳಿಕ ಶುಕ್ರವಾರ ಮಧ್ಯಾಹ್ನ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಸ್ ಭೈರಪ್ಪ ಬೆಂಗಳೂರಿನ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಬುಧವಾರ ಮಧ್ಯಾಹ್ನ ಹೃದಯಸ್ತಂಭನದಿಂದ ಮೃತಪಟ್ಟಿದ್ದಾರೆ.