Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮೈಸೂರು : ಹಿರಿಯ ಸಾಹಿತಿ ಎಸ್.ಎಲ್. ಭೈರಪ್ಪನವರ ಅಂತ್ಯಕ್ರಿಯೆ ನಿನ್ನೆ ನಡೆಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿ ಚಿತಾಭಸ್ಮ ವಿಸರ್ಜನೆ ಮಾಡಲಾಗಿದೆ.
ಶ್ರೀರಂಗಪಟ್ಟಣದ ರಂಗನಾಥ ಸ್ಥಾನ ಘಟ್ಟದಲ್ಲಿ ಭೈರಪ್ಪ ಕುಟುಂಬ ಸದಸ್ಯರು ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಸ್ಥಿ ವಿಸರ್ಜನೆ ಮಾಡಿದ್ದಾರೆ.
ಪದ್ಮಶ್ರೀ, ಪದ್ಮವಿಭೂಷಣ ಪುರಸ್ಕೃತ ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ಅವರು, ನಿನ್ನೆ ಪಂಚಭೂತಗಳಲ್ಲಿ ಲೀನವಾದರು.