Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಹಾವೇರಿ: ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ ಎಸಗಿ, ಬಳಿಕ ಈ ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಸೆಪ್ಟೆಂಬರ್ 13 ರಂದು ವಿದ್ಯಾರ್ಥಿನಿ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ, ಯುವಕರಿಬ್ಬರು ಅವಳನ್ನು ಕಾರಿನಲ್ಲಿ ಅಪಹರಿಸಿದ್ದಾರೆ. ಅತ್ಯಾ*ಚಾರದ ಬಗ್ಗೆ ಯಾರಿಗೂ ತಿಳಿಸದಂತೆ ತಡೆಯಲು ಬಾಯಿಗೆ ಬಟ್ಟೆ ಕಟ್ಟಿ ಬಲವಂತವಾಗಿ ಅಪಹರಿಸಿ, ನಂತರ ಅವಳನ್ನು ಕಾಡಿನ ಪ್ರದೇಶಕ್ಕೆ ಕರೆದೊಯ್ದು ಅತ್ಯಾ*ಚಾರವೆಸಗಿದ್ದಾರೆ.ಅತ್ಯಾ*ಚಾರವೆಸಗಿದ ಬಳಿಕ, ಈ ಪಾಪಿಗಳು ವಿದ್ಯಾರ್ಥಿನಿಯ ಮೇಲೆ ಮತ್ತೊಂದು ಅತಿ ಹೇಯ ಕೃತ್ಯಕ್ಕೆ ಮುಂದಾಗಿದ್ದಾರೆ. ಅವರು ವಿದ್ಯಾರ್ಥಿನಿಯ ಅಸಹಾಯಕತೆಯ ವಿಡಿಯೋವನ್ನು ಮಾಡಿದ್ದು, ಈ ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ
ಈ ಸಂಬಂಧ ಶಿಗ್ಗಾಂವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳ ಪೈಕಿ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ