Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ
ದೇಶಪ್ರಮುಖ

Death toll rises ಕರೂರ್ ಕಾಲ್ತುಳಿತ: ಮೃತರ ಸಂಖ್ಯೆ 38ಕ್ಕೇರಿಕೆ, 150ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು, ನ್ಯಾಯಾಂಗ ತನಿಖೆಗೆ ಆದೇಶ

Share
2 Min Read
SHARE

Subscribe NewsicsKannada/YouTube

newsics.com

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ನಟ- ರಾಜಕಾರಣಿ ವಿಜಯ್ ದಳಪತಿ ರ‍್ಯಾಲಿಯಲ್ಲಿ ಉಂಟಾದ ಕಾಲ್ತುಳಿತಕ್ಕೆ 16 ಮಹಿಳೆಯರು ಮತ್ತು ಎಂಟು ಮಕ್ಕಳು ಸೇರಿದಂತೆ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ.

ಕರೂರ್ ಮತ್ತು ತಿರುಚ್ಚಿಯಾದ್ಯಂತ 150ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕನಿಷ್ಠ ಹತ್ತು‌ ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳನ್ನು ಹೊರತುಪಡಿಸಿ ಬಹುತೇಕ ಮೃತರು ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಬೆಂಬಲಿಗರಾಗಿದ್ದರು.

ರ‍್ಯಾಲಿಗಾಗಿ ಕನಿಷ್ಠ ಆರು ಗಂಟೆಗಳ ಕಾಲ ಕಾದಿದ್ದರು. ಸ್ಥಳಕ್ಕೆ ರ‍್ಯಾಲಿ ತಡವಾಗಿ ಬಂದಿತು. ಹೀಗಾಗಿ, ಹೆಚ್ಚಿನ ಜನಸಂದಣಿ ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ರಾಜ್ಯ ಆರೋಗ್ಯ ಸಚಿವ ಎಂ. ಸುಬ್ರಹ್ಮಣಿಯನ್ ಕರೂರಿಗೆ ಧಾವಿಸಿದ್ದಾರೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುವಂತೆ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೂರ್ ಜಿಲ್ಲಾ ಕಾರ್ಯದರ್ಶಿ ವಿ. ಸೆಂಥಿಲ್‌ ಬಾಲಾಜಿ ಅವರಿಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ವರದಿಗಳ ಪ್ರಕಾರ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಬೆಂಬಲಿಗರು, ತಮ್ಮ ನಾಯಕನಿಗಾಗಿ ಸುಮಾರು ಆರು ಗಂಟೆಗಳಿಗೂ ಹೆಚ್ಚು ಕಾಲ ಕಾದು ಕುಳಿತಿದ್ದರು. ಆದರೆ, ದಳಪತಿ ವಿಜಯ್ ಕಾರ್ಯಕ್ರಮದ ಸ್ಥಳಕ್ಕೆ ತಡವಾಗಿ ಆಗಮಿಸಿದ್ದರು.

ಸ್ಥಳದಲ್ಲೇ 10ಕ್ಕೂ ಹೆಚ್ಚು ಮಂದಿ ಸಾವು:
ರ‌್ಯಾಲಿಯ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ಜನಸಮೂಹದ ಒಂದು ಭಾಗ ಮುಂದಕ್ಕೆ ಬಂದ ನಂತರ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಮಕ್ಕಳು ಸೇರಿದಂತೆ ಹಲವರಿದ್ದವರು. ಈ ವೇಳೆ ಕಾಲ್ತುಳಿತ ಸಂಭವಿಸುತ್ತಿದ್ದಂತೆ ಜನದಟ್ಟಣೆಯಲ್ಲಿ ಹಲವರು ಮೂರ್ಛೆ ಹೋದರು. ಈ ವೇಳೆ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಒಂಬತ್ತು ವರ್ಷದ ಬಾಲಕಿ ಕಾಣೆಯಾಗಿದ್ದಾಳೆಂದು ವರದಿಯಾಗಿದೆ.

ತಡವಾಗಿ ಆಗಮಿಸಿದ ವಿಜಯ್ ದಳಪತಿ ಅವರನ್ನು ನೋಡಲು, ಅವರ‌ ಮಾತು‌ ಕೇಳಲು ಹಲವರು ಮರ ಹತ್ತಿದ್ದರು. ವಿಜಯ್ ದಳಪತಿ ಮಾತನಾಡಲಾರಂಭಿಸಿದ ಕೆಲವೇ ಸಮಯದಲ್ಲಿ ವಿಜಯ್ ಅವರಿದ್ದ ವ್ಯಾನ್ ಹಿಂಭಾಗದಲ್ಲಿ ಮರದ ಕೊಂಬೆಗಳು‌ ಮುರಿದುಬಿದ್ದವು. ಇದರಿಂದ ನೂಕುನುಗ್ಗಲು ಉಂಟಾಯಿತು ಎಂದು ಪ್ರತ್ಯಕ್ಷದರ್ಶಿಗಳ ಹೇಳಿಕೆ ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಹತ್ತು ಲಕ್ಷ ರೂ. ಪರಿಹಾರ:

ಮೃತರ ಕುಟುಂಬಕ್ಕೆ ಹತ್ತು‌ ಲಕ್ಷ ಪರಿಹಾರ ಘೋಷಿಸಿರುವ ಸಿಎಂ ಸ್ಟಾಲಿನ್, ಗಾಯಾಳುಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ ತುರ್ತು ವೈದ್ಯಕೀಯ ನೆರವು ನೀಡುವಂತೆ ಎಲ್ಲಾ ಆಸ್ಪತ್ರೆಗಳಿಗೆ ಸೂಚಿಸಿದ್ದಾರೆ.

ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿರುವ ಸರ್ಕಾರ, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶೆ ಅರುಣಾ ಜಗದೀಶನ್ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಭಾನುವಾರ (ಸೆ.28) ಸ್ಟಾಲಿನ್ ಅವರು ದುರಂತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಿಜಯ್ ದಳಪತಿ ವಿರುದ್ಧ ಕೇಸ್ ದಾಖಲಿಸುವ ಸಾಧ್ಯತೆಯಿದೆ. ಕೇಸ್ ದಾಖಲಿಸಿ ವಿಜಯ್ ದಳಪತಿ‌ ಅವರನ್ನು ಬಂಧಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.

ಬೆಡ್‌ರೂಮ್‌ನಲ್ಲಿ ಅಶ್ಲೀಲ ವಿಡಿಯೋ ಭಂಗಿ ಅನುಕರಿಸುವಂತೆ ಪೀಡಿಸುತ್ತಿದ್ದ ಗಂಡನನ್ನು ಕೊಂದ ಹೆಂಡತಿ

ಕರ್ನಾಟಕ ಲೇಖಕಿಯರ ಸಂಘಕ್ಕೆ ನಾಲ್ವರು ರಾಜೀನಾಮೆ

Navaratri special ನವರಾತ್ರಿಯ ಕೊನೆಯ ಮೂರು ದಿನ ಈ ಮಹಿಳೆಯರು ಪೂಜೆ, ಉಪವಾಸ ಮಾಡಬಾರದೇಕೆ?

ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ – ವಿಡಿಯೋ ಮಾಡಿ ಬೆದರಿಕೆ

TAGGED:Karur stampede: Death toll rises to 38over 150 hospitalized
Share This Article
Facebook Twitter Copy Link Print
Previous Article ನರ್ಸಿಂಗ್ ವಿದ್ಯಾರ್ಥಿನಿಯನ್ನು ಅಪಹರಿಸಿ, ಅತ್ಯಾ*ಚಾರ – ವಿಡಿಯೋ ಮಾಡಿ ಬೆದರಿಕೆ
Next Article GOOD MORNING |Today’s Horoscope ಇಂದಿನ ರಾಶಿ ಭವಿಷ್ಯ, 28-09-2025, ಭಾನುವಾರ, ಹಣಕಾಸಿನಲ್ಲಿ ಪ್ರಗತಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?